ಬಳ್ಳಾರಿ :ವೀರೇಶ ಅವರಿಗೆ ಪಿಎಚ್.ಡಿ ಪದವಿ

Upayuktha
0


ಬಳ್ಳಾರಿ :
ಸ್ಥಳೀಯ ಶ್ರೀಮತಿ ಗಾಲಿರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕರಾದ ವೀರೇಶ ಎಂ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಘೋಷಿಸಿದೆ.

 

ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ವೀರೇಶ ಎಂ ಇವರು ಹೊಸಪೇಟೆಯ ಆನಂದ್‌ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಟಿ.ವೀರಭದ್ರಪ್ಪ ಅವರ ಮಾರ್ಗದರ್ಶನದಲ್ಲಿ ``ಕೊಳಚೆ ಪ್ರದೇಶದ ನಿವಾಸಿಗಳ ರಾಜಕೀಯ ಸಹಭಾಗೀತ್ವ ಮತ್ತು ಅಭಿವೃದ್ಧಿ (ಬಳ್ಳಾರಿಯನ್ನು ಅನುಲಕ್ಷಿಸಿ) ಎಂಬ ಶೀರ್ಷಿಕೆ ಅಡಿಯಲ್ಲಿ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ಘೋಷಣೆ ಮಾಡಿದೆ. 


ವೀರೇಶ ಎಂ ಇವರನ್ನು ಶ್ರೀಮತಿ ಗಾಲಿರುಕ್ಮಿಣಮ್ಮ ಚೆಂಗಾರೆಡ್ಡಿ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಸುಧಾಕರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top