ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ಮಾನವಿಕ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಇದೇ ಬರುವ ಆಗಸ್ಟ್ 10 ನೇ ತಾರೀಕಿನಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ 'ಫಿಲೋ ಆಟಿದ ಕೂಟ' ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ, ಮುಖ್ಯ ಅತಿಥಿಗಳಾಗಿ ಯಕ್ಷ ಬೊಳ್ಳಿ ದಿನೇಶ್ ರೈ ಕಡಬ, ಕುಸಲ್ದ ಗುರಿಕಾರೆ ದಿನೇಶ್ ಶೆಟ್ಟಿಗಾರ್ ಕೋಡಪದವು, ಕುಸಲ್ದ ರಾಜೆ ಸುಂದರ ರೈ ಮಂದಾರ, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಪುತ್ತೂರಿನ ಡಾ. ಶ್ರೀ ಪ್ರಕಾಶ್ ಬಿ ವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಯಕ್ಷ ಬೊಳ್ಳಿ ದಿನೇಶ್ ರೈ ಕಡಬ, ಕುಸಲ್ದ ಗುರಿಕಾರೆ ದಿನೇಶ್ ಶೆಟ್ಟಿಗಾರ್ ಕೋಡಪದವು ಹಾಗೂ ಕುಸಲ್ದ ರಾಜೆ ಸುಂದರ ರೈ ಮಂದಾರ ಇವರಿಂದ ಹಾಸ್ಯ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ