ಪ್ರಥಮ ಉಡುಪಿ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0




ಉಡುಪಿ: ಕನ್ನಡ ಜಾನಪದ ಪರಿಷತ್, ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 27ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದರ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಇಂದು (ಆ.2) ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿ, ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಜನಪದ ನಮ್ಮ ನಾಡಿನ ಅದ್ಭುತವಾದ ಆಸ್ತಿ ಎಂದರು.


ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ, ಕಾರ್ಯಾಧ್ಯಕ್ಷ ಉದಯಕುಮಾರ್ ಬಿ ಹೈಕಾಡಿ, ಕೋಶಾಧಿಕಾರಿ ಚಂದ್ರ ಹಂಗಾರಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪ್ರಕಾಶ್ ಸುವರ್ಣ ಕಟಪಾಡಿ, ಸಂ.ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ತಾಲೂಕು ಅಧ್ಯಕ್ಷ ಮಾಯಾ ಕಾಮತ್, ತಾಲೂಕು ಪ್ರಧಾನ ಕಾರ್ಯದರ್ಶಿ ಕುಸುಮ ಕಾಮತ್, ಪ್ರಭಾ ರಾವ್ ಮಠದ ರಮೇಶ್ ಭಟ್ ಮುಂತಾದವರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top