ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ವಿವೇಕಾನಂದ ಪ.ಪೂ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಸೆ.20 ರಂದು ನರೇಂದ್ರ ಪ. ಪೂ ಕಾಲೇಜು ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಬಾಲಕ - ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನವನ್ನು ಪಡೆದು ಮುಂಡಾಜೆ ಪ.ಪೂ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ದ್ವಿತೀಯ ಕಲಾ ವಿಭಾಗದ ದೀಕ್ಷಿತಾ, ಪ್ರೀತಿಕಾ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಶ್ರೇಯಾ ಶ್ರೀ ಆಯ್ಕೆಯಾಗಿರುತ್ತಾರೆ. ದ್ವಿತೀಯ ಕಲಾ ವಿಭಾಗದ ದೀಕ್ಷಿತಾ ಸವ್ಯಸಾಚಿ ಆಟಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು.
ಉಳಿದಂತೆ ದ್ವಿತೀಯ ವಿಜ್ಞಾನ ವಿಭಾಗದ ಚಂಪ್ರೀತ, ದ್ವಿತೀಯ ವಾಣಿಜ್ಯ ವಿಭಾಗದ ದೃತಿ, ಪ್ರಥಮ ವಿಜ್ಞಾನ ವಿಭಾಗದ ಸಿಂಚನಾ ಎಂ.ಎಸ್ ಅಮೂಲ್ಯ, ಲಿಷಿಕಾ, ಹರ್ಷಿತಾ, ಜಾಸ್ಮಿನ್, ಸಂಜನಾ ಹಾಗೂ ಸೌಜನ್ಯ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ