ಮಾದರಿಯಾಗಿ ಬಿ.ಸಿ. ರೋಡ್‌ ನ ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮರು ನಿರ್ಮಾಣ: ಸಂಸದ ಚೌಟ

Upayuktha
0




ಬಂಟ್ವಾಳ: 
ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಬಿ.ಸಿ ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.


ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು "ಬಿ.ಸಿ. ರೋಡ್ ನಲ್ಲಿ ಮರು ನಿರ್ಮಾಣವಾಗಲಿರುವ ಬ್ರಹ್ಮರ್ಷಿ ನಾರಾಯಣಗುರು ವೃತ್ತವನ್ನು ನೋಡಿದಾಗ ಅದು ನಮ್ಮ ಸರ್ಕಲ್ ಎನ್ನುವ ಭಾವನೆ ಇಲ್ಲಿನ ಸ್ಥಳೀಯರಲ್ಲಿ ಮೂಡಬೇಕು. ಗುತ್ತಿಗೆದಾರರು ಅಲ್ಲಿ ಕೇವಲ ಸರ್ಕಲ್ ನಿರ್ಮಾಣ ಮಾಡಿ ಹೋದರೆ ಸಾಲದು. ಬದಲಾಗಿ ಇಲ್ಲಿನ ಜನರ ಅಭಿಪ್ರಾಯ ಸಂಗ್ರಹಿಸಿ ಅದರ ಆಧಾರದಲ್ಲಿ ಈ ವೃತ್ತವನ್ನು ಮಾದರಿ ವೃತ್ತವಾಗಿ ಅಭಿವೃದ್ದಿಪಡಿಸಬೇಕು. ಆ ಮೂಲಕ ಇದೊಂದು ಬಂಟ್ವಾಳ ಜನತೆಯ ಸರ್ಕಲ್ ಆಗಿ ರೂಪುಗೊಳ್ಳಬೇಕು" ಎಂದು ಸಲಹೆ ನೀಡಿದರು.


ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ನಿರ್ಮಾಣದ ಜಾಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೆದ್ದಾರಿ ಪ್ರಾಧಿಕಾರದವರು ಗುರುತಿಸಿರುವ ಅಷ್ಟೇ ಜಾಗದಲ್ಲಿ ವೃತ್ತವನ್ನು ಪುನರ್‌ ನಿರ್ಮಿಸಬೇಕಾಗುತ್ತದೆ. ಆದರೆ ವೃತ್ತದ ವಿನ್ಯಾಸದಲ್ಲಿ ನಮಗೆ ಬೇಕಾದಂತೆ ಕೆಲವೊಂದು ಬದಲಾವಣೆ ಮಾಡುವುದಕ್ಕೆ ಅವಕಾಶ ಇದೆ. ಈ ಸರ್ಕಲ್ ಜಿಲ್ಲೆಯ ಸಂಸ್ಕೃತಿ ಪ್ರತಿಬಿಂಬಿಸುವ ರೀತಿ ರೂಪುಗೊಳ್ಳಬೇಕು" ಎಂದು ಸಲಹೆ ನೀಡಿದರು.


ಈ ವೃತ್ತ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರನ್ನು ಒಳಗೊಂಡ ಸಮಿತಿಯೊಂದನ್ನು ನಿರ್ಮಿಸಲಾಗುತ್ತದೆ. ಈ ಸಮಿತಿಯು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ವೃತ್ತವನ್ನು ಯಾವ ರೀತಿ ನಿರ್ಮಿಸಬೇಕೆಂಬ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಳಿಕ ಅದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಅಂತಿಮ ರೂಪ ನೀಡಲಾಗುತ್ತದೆ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.


ಈ ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಅಜ್ಮಿ, ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಬಿಲ್ಲವ ಸಂಘದ ತಾಲೂಕು ಅದ್ಯಕ್ಷ ಸಂಜೀವ ಪೂಜಾರಿ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಿಲ್ಲವ ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮತ್ತಿತರರು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top