ಬಳ್ಳಾರಿ: ಬಳ್ಳಾರಿ ನಗರದ ಹೀರದ ಸೂಗಮ್ಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶಶಿಧರ 2024-25ನೇ ಸಾಲಿನ ಬಳ್ಳಾರಿ ಪೂರ್ವ ವಲಯದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶಶಿಧರ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟ ಮತ್ತು 80 ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ. ಅಲ್ಲದೆ 4X100 ಮೀಟರ್ ರಿಲೇ ಓಟದಲ್ಲಿ. ರಾಹುಲ್, ಕೇಶವ, ಮಹ್ಮದ್ ಅಜೀರ್ ಮತ್ತು ಶಶಿಧರ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಬೈಲುವದ್ದಿಗೇರಿ ಎರಿಸ್ವಾಮಿ, ಶಾಲೆಯ ಮುಖ್ಯ ಗುರುಗಳು ಮತ್ತು ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ