ಬಳ್ಳಾರಿ: ಅವಘಡ ಸಂಭವಿಸಿದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿ ಶಾಮಕ, ಪೊಲೀಸ್, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಹೆದ್ದಾರಿಗಳಲ್ಲಿ ಬೃಹತ್ ವಾಹನಗಳಲ್ಲಿ ಎಲ್‌ಪಿಜಿ ಅನಿಲ ತುಂಬಿಕೊಂಡು ಸಂಚರಿಸುವ ಸಂದರ್ಭ ದಲ್ಲಿ ಅವಘಡ ಸಂಭವಿಸಿದ ಮಾಹಿತಿ ಬಂದ ತಕ್ಷಣವೇ ವಿವಿಧ ಇಲಾಖೆಗಳ ಜವಾಬ್ದಾರಿಯುತವಾಗಿ ಕಾರ್ಯಪ್ರವೃತ್ತರಾಗಬೇಕಿದೆ ಎಂದರು. ಅನಿಲ ಸೋರಿಕೆ ನಿರ್ವಹಣೆ ಕುರಿತು ಅಣುಕು ಪ್ರದರ್ಶನದಿಂದ ಸಂಬಂಧಿಸಿದ ವಿವಿಧ ಇಲಾಖೆಗಳು ಬಲಗೊಂಡಿದ್ದು, ಘಟನೆ ಸಂಭವಿಸಿದ್ದಲ್ಲಿ ರಕ್ಷಣೆ ಕಾರ್ಯ ಕೈಗೊಳ್ಳಲು ಸಕಲ ರೀತಿ ಸಿದ್ಧತೆಗೊಳಿಸಲಾಗಿದೆ ಎಂದರು.
ಎನ್‌ಡಿಆರ್‌ಎಫ್‌ನ ಚೀಪ್ ಕಮಾಂಡೆಂಟ್ ಅಖಿಲೇಶ್ ಕುಮಾರ್ ಚೂಬೆ ಅವರು ಮಾತನಾಡಿ, ಈ ಭಾಗದ ಬೃಹತ್ ಕಾರ್ಖಾನೆಗಳಲ್ಲಿ ವಿವಿಧ ರೀತಿಯ ಅನಿಲ ಬಳಕೆಯಿದೆ. ಈ ಅಣಕು ಪ್ರದರ್ಶನವು ಉಪಯೋಗವಾಗಲಿದೆ. ಎಲ್ಲಾ ರೀತಿಯ ಸಹಕಾರ ನೀಡಿದ ಜಿಲ್ಲಾಡಳಿತಕ್ಕೆ ಅಭಿನಂಧಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಎನ್‌ಡಿಆರ್‌ಎಫ್ ತಂಡದ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಅಗ್ನಿ ಶಾಮಕ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ