ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

Upayuktha
0


ಬಳ್ಳಾರಿ: 2024-25 ನೇ ಸಾಲಿನ ಬಳ್ಳಾರಿ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಹೊಸರಗುಡಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಇದರಲ್ಲಿ ಎಸ್. ಇರಾವತಿ 3000 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 1,500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 800 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಮೌನಿಕ ಟಿ.ಜಾವೆಲಿನ್ ಎಸತೆಯಲ್ಲಿ ಪ್ರಥಮ  ಸ್ಥಾನ ಪಡೆದಿದ್ದಾರೆ,  ಏ .ಜ್ಯೋತಿ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ,ಕೆ.ಹೊನ್ನೂರ ಸ್ವಾಮಿ ಐದು ಕಿಲೋಮೀಟರ್ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಧರ್ಮ ತೇಜ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ, ಕೆ ಪವಿತ್ರ 400 ಮೀಟರ್ ಹರಡಲ್ಸ್ ನಲ್ಲಿ ದ್ವಿತಯ ಸ್ಥಾನ ಪಡೆದಿದ್ದಾರೆ.


ಶಾಲೆಯ ಮುಖ್ಯೋಪಾಧ್ಯಾಯರಾದ  ಸುರೇಶ್ ಕುಮಾರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ  ಸೂರ್ಯಪ್ರಕಾಶ್ ರೆಡ್ಡಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಊರನವರು ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top