ಬಳ್ಳಾರಿ: ಬಳ್ಳಾರಿ ನಗರದ ಸಾರ್ವಜನಿಕರಿಗೆ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರು ಖಲೀಲ್ ಸಾಬ್ ಮತ್ತು ಮೇಯರ್ ಮುಲ್ಲಂಗಿ ನಂದೀಶ್ ಅವರು ವಿನಾಯಕ ಚೌತಿಯ ಶುಭಾಶಯಗಳನ್ನು ತಿಳಿಸುತ್ತಾ, .ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡದೇ, ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ತಿಳಿಸಿದರು.
ಭೂಮಿ ಮೇಲೆ ಮನುಷ್ಯ ಸೇರಿದಂತೆ ಎಲ್ಲಾ ಜೀವಿಗಳು ಸಮೃದ್ದಿಯಾಗಿ ಜೀವಿಸಲು ಗಾಳಿ, ನೀರು, ಆಹಾರ ಮೂಲಭೂತವಾಗಿ ಬೇಕು, ಇದೆಲ್ಲವನ್ನು ನಮಗೆ ನೀಡುವ ಪರಿಸರದ ಸಂರಕ್ಷಣೆ ಅತ್ಯಗತ್ಯ ವಾಗಿದೆ. ಪರಿಸರದಲ್ಲಿ ಅನೈರ್ಮಲ್ಯತೆ ಕಡಿಮೆ ಮಾಡಲು ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಆಚರಿಸೋಣ ಎಂದು ಹೇಳಿದರು. ಪಿಒಪಿ, ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಕಾಲುವೆಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಭೌತಿಕ ಹಾಗೂ ರಾಸಾಯನಿಕ ಗುಣ ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ.
ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಿಗಳು ಮತ್ತು ಸಾರ್ವಜನಿಕರ ಆರೋಗ್ಯದ ಮೇಲೂ ಅಪಾಯ ವಾಗಲಿದೆ ಎಂದು ಅವರು ತಿಳಿಸಿದರು. ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿರುವ ಕುರಿತು ಆದೇಶವಿದ್ದು, ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಬಜಾರಿನಲ್ಲಿ ಪಿಓಪಿ ಗಣಪತಿ ಗಳನ್ನು ಮಾರಾಟ ಮಾಡುತಿದ್ದ ಶಾಪ್‌ಗಳ ಮೇಲೆ ದಾಳಿ ನಡೆಸಿ ಸೂಕ್ತ ಕ್ರಮಕೈಗೊಂಡಿದ್ದಾರೆ. ಈ ಸಂಧರ್ಬದಲ್ಲಿ ಮಹಾನಗರ ಪಾಲಿಕೆಯ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ