ಬಂಟ್ವಾಳ: ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರಿನಲ್ಲಿ ಶಿಕ್ಷಕಿಯಾಗಿ ಕಳೆದ 29 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸುಧಾ ನಾಗೇಶ್ ಇವರು ಮೂಡಲ ಮನೆ, ಹೃದಯರಾಗ, ಹೀಗೆ ಸುಮ್ಮನೆ, ಜೀನಿಯಸ್, ಹೊಂಬೆಳಕು ಮೊದಲಾದ ಕೃತಿಗಳನ್ನು ಬರೆದು ಸಾಹಿತ್ಯ ಲೋಕದಲ್ಲಿ ಪರಿಚಿತರಾಗಿದ್ದಾರೆ.
ಹಲವು ಕನ್ನಡ ಹಾಗೂ ತುಳು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಉತ್ತಮ ಗೈಡರ್ ಪ್ರಶಸ್ತಿ, ಸಾಹಿತ್ಯ ರತ್ನ ಪ್ರಶಸ್ತಿ, ಚೈತನ್ಯಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿ ಇವರನ್ನು ಗೌರವಿಸಲಾಗಿದೆ. ಕವಯಿತ್ರಿಯಾಗಿ, ನಿರೂಪಕಿಯಾಗಿ, ಅಂಕಣ ಬರಹಗಾರ್ತಿಯಾಗಿ, ಆಕಾಶವಾಣಿ ಕಲಾವಿದೆಯಾಗಿ, ನಟಿಯಾಗಿ ಗುರುತಿಸಲ್ಪಟ್ಟಿರುವ ಸುಧಾ ನಾಗೇಶ್ ಬಂಟ್ವಾಳ ತಾಲೂಕು ಉತ್ತಮ ಶಿಕ್ಷಕಿಯಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ