ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಜ್ಯೋತಿ-ಕೆಎಂಸಿ ಆಸ್ಪತ್ರೆ ಬಳಿ ನಿರ್ಮಾಣಗೊಳ್ಳಲಿರುವ ಬಹು ನಿರೀಕ್ಷಿತ ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ರವರ ಭವ್ಯ ಪ್ರತಿಮೆ ಸಹಿತ ಆಕರ್ಷಕ ವೃತ್ತದ ಭೂಮಿ ಪೂಜೆಯು ಇಂದು ನೆರವೇರಿತು.
ಭಾರತವೆಂಬ ಪ್ರಜಾಪ್ರಭುತ್ವ ದೇಶಕ್ಕೆ ಸಂವಿಧಾನವೆಂಬ ಭದ್ರ ಬುನಾದಿ ಹಾಕಿರುವ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಈ ನಾಡಿನ ಹೆಮ್ಮೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಶೀಘ್ರವಾಗಿ ಈ ಯೋಜನೆಯು ಪೂರ್ಣಗೊಳ್ಳಲಿದೆ.
ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಶ್ರೀಮತಿ ಸುನಿತಾ, ಪಾಲಿಕೆ ಸದಸ್ಯರುಗಳು, ದಲಿತ ಸಂಘಟನೆಗಳ ಮುಖಂಡರುಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ