ಅಕ್ಟೋಬರ್ 2: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ

Upayuktha
1 minute read
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಅಕ್ಟೋಬರ್ 2 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆಯಲಿದೆ.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ತಂಡ, ಮಂಗಳೂರು ಪೊಲೀಸ್ ಆಯುಕ್ತರ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಂಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.


ಈ ಕ್ರಿಕೆಟ್ ಪಂದ್ಯಾವಳಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಉದ್ಘಾಟಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top