ಮಂಗಳೂರು: ಸೆಪ್ಟೆಂಬರ್ 17 ರಿಂದ 24ರ ತನಕ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಅಭಿಯಾನದ ನಡೆಸಲಾಗುತ್ತಿದೆ. ಇದರ ಪ್ರಯುಕ್ತ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಇಂದು 41ನೇ ಸೆಂಟ್ರಲ್ ವಾರ್ಡಿನಲ್ಲಿ ಇರುವ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಸ್ಥಳೀಯ ಮನಪಾ ಸದಸ್ಯೆ ಹಾಗೂ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ, ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಕಮಲಾಕ್ಷಿ, ಶಬರಿ ಶೆಟ್ಟಿ, ಮತ್ತು ಮನಪಾ ಸದಸ್ಯೆ ಹಾಗೂ ಮಹಿಳಾ ಮೋರ್ಚಾದ ಕಾರ್ಯದರ್ಶಿ ಲೀಲಾವತಿ ಪ್ರಕಾಶ್, ಮತ್ತು ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ