ದ.ಕ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಪದಗ್ರಹಣ

Upayuktha
0


ಮಂಗಳೂರು: ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ಜಿಲ್ಲಾ ಮಹಿಳಾ ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಮಹಿಳಾ ಸಬಲೀಕರಣದ ಮಾಹಿತಿ ಹಾಗೂ ಓಣಂ ಆಚರಣೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.


ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಟಿ. ಪ್ರೇಮಲತಾ ರಾವ್  ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮಂಡಲಗಳ ಒಕ್ಕೂಟ (ರಿ) ಪುತ್ತೂರು ಘಟಕದ ಅಧ್ಯಕ್ಷೆ ಶ್ರೀಮತಿ ಶಾಂತಿ ಹೆಗಡೆ ಸಭಾಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರು ಮುಖ್ಯ ಅತಿಥಿಯಾಗಿ ಸಂಪನ್ಮೂಲ ವ್ಯಕ್ತಿಯಾಗಿ ಮ‌ಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು.


ನಂತರ ಸಾಧಕ ಮಹಿಳೆಯರ ಸನ್ಮಾನ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಚಂಚಲ ತೇಜೋಮಯ, ನಿಯೋಜಿತ ಅಧ್ಯಕ್ಷೆ ಶ್ರೀಮತಿ ಉಷಾ ನಾಯಕ್, ಸಾಹಿತಿ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಮಹಿಳಾ ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಬೇರೆ ಬೇರೆ ತಾಲೂಕುಗಳ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top