PMABHIM ಯೋಜನೆಯಡಿ ದ.ಕ.ಗೆ 25.11 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

Upayuktha
0


ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್‌ಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.



ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ:

ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ ಸೆಂಟರ್ ನ ಎರಡನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ (IPHL) ಕಟ್ಟಡ ನಿರ್ಮಾಣ ಮಾಡಲು 1.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಕ್ಯಾ. ಚೌಟ ಹೇಳಿದ್ದಾರೆ.

 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮಟ್ಟದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗೆ ಮತ್ತಷ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಅನುದಾನವನ್ನು ಬಿಡುಗಡೆಗೊಳಿಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆಪಿ ನಡ್ಡಾ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top