ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಸಮಾಜ ಮಂದಿರ ಸಭಾ ಮೂಡುಬಿದಿರೆ, ಕಸಾಪ ಮೂಡುಬಿದಿರೆ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಹಿರಿಯ ಸಾಹಿತಿ ಡಾ. ನಾ. ಮೊಗಸಾಲೆ-80 ಅಭಿನಂದನ ಸಮಾರಂಭ ನಾಳೆ (ಸೆ.21) ಸಮಾಜಮಂದಿರದಲ್ಲಿ ನಡೆಯಲಿದೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರ ತನಕ ಈ ಸಮಾರಂಭ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಲಿದ್ದಾರೆ.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆವಹಿಸಲಿದ್ದು, ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಅಭಿನಂದನ ನುಡಿಗಳನ್ನಾಡಲಿದ್ದಾರೆ. ಬಳಿಕ ಮೊಗಸಾಲೆಯವರಿಗೆ ಗೌರವ ಸಮ್ಮಾನ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಮೊಗಸಾಲೆಯವರ ಏಳು ಕೃತಿಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಿದ್ದಾರೆ.
ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್, ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ. ಶ್ರೀಪತಿ ಭಟ್ ಹಾಗೂ ವರ್ಧಮಾನ ಪ್ರಶಸ್ತಿ ಪೀಠದ ಕಾರ್ಯಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅವರ ಗೌರವ ಉಪಸ್ಥಿತಿ ಇರಲಿದೆ.
ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ್, ಡಾ. ಬಿ. ಜನಾರ್ದನ ಭಟ್, ಡಾ. ರವಿಶಂಕರ ಜಿ.ಕೆ, ಡಾ. ಸುಭಾಷ್ ಪಟ್ಟಾಜೆ ಇವರು ಮೊಗಸಾಲೆಯವರ ಕೃತಿಗಳ ಪರಿಚಯ ಮಾಡಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ