ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!

Upayuktha
0

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ



ಬೆಂಗಳೂರು: ಮಿನ್ನಲ್ ಮುರಳಿ' ಮತ್ತು '2018 - ಎವ್ರಿಒನ್​​ ಈಸ್ ಎ ಹೀರೋ' ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ "ಎಆರ್​​ಎಂ​​" (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.


 ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್​​ ಕೊಟ್ಟಿದೆ.


ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top