ವಾಸ್ಕೊದಲ್ಲಿ ಅಭಿಮಾನಿಗಳಿಂದ ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಣೆ

Upayuktha
0

ಪಣಜಿ: ಪ್ರತಿ ವರ್ಷದಂತೆಯೇ ಪ್ರಸಕ್ತ ವರ್ಷವೂ ಕೂಡ ಕಿಚ್ಚ ಸುದೀಪ್ ಅಭಿಮಾನಿ ಬಳಗ ಗೋವಾ ವತಿಯಿಂದ ಸಪ್ಟೆಂಬರ್ 2 ರಂದು ವಾಸ್ಕೊದಲ್ಲಿ ವಿಶೇಷವಾಗಿ ಕಿಚ್ಚನ ಹುಟ್ಟುಹಬ್ಬ ಆಚರಿಸಲಾಯಿತು. ಅಂಗವಿಕ ಕೈಯ್ಯಲ್ಲಿ ಕೇಕ್ ಕತ್ತರಿಸಿ, ಅನ್ನದಾನ ಮಾಡಿ, ಕಿಚ್ಚನ ಚಲನಚಿತ್ರ ಹಾಡಿ ಕುಣಿದು ಅಭಿನಯ ಚಕ್ರವರ್ತಿ ಕಿಚ್ಚನ ಹುಟ್ಟುಹಬ್ಬವನ್ನು ಆಚರಿಸಲಾಯಿತು.


ಈ ಸಂರ್ದದಲ್ಲಿ ಗೋವಾ ಕಿಚ್ಚ ಸುದೀಪ ಅಭಿಮಾನಿ ಬಳಗದ ಅಧ್ಯಕ್ಷ ಕೃಷ್ಣ ಕಿಚ್ಚ-ಸುದ್ಧಿಗಾರರೊಂದಿಗೆ ಮಾತನಾಡಿ- ಪ್ರತಿ ವರ್ಷದಂತೆಯೇ ಪ್ರಸಕ್ತ ವರ್ಷವೂ ಕೂಡ ಸಪ್ಟೆಂಬರ್ 2 ಕಿಚ್ಚನ ಅಭಿಮಾನಿಗಳಿಗೆ ಹಬ್ಬ. ಈ ಹಬ್ಬವನ್ನು ನಾವು ಗೋವಾದಲ್ಲಿ ಕಿಚ್ಚ ಅಭಿಮಾನಿ ಬಳಗದ ವತಿಯಿಂದ ಅದ್ದೂರಿಯಾಗಿ ಆಚರಿಸಿದ್ದೇವೆ. ನಾವು ಅಂಗವಿಕಲರ ಕೈಯಿಂದ ಕೇಕ್ ಕತ್ತರಿಸಿ ಅನ್ನದಾನ ಮಾಡಿ, ಕಿಚ್ಚನ ಚಲನಚಿತ್ರದ ಹಾಡುಗಳನ್ನು ಹಾಡಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿದ್ದೇವೆ. ಮುಂಬರುವ ದಿನಗಳಲ್ಲಿ ಕಿಚ್ಚನ ಎಲ್ಲ ಚಲನಚಿತ್ರಗಳು ಯಶಸ್ವಿಯಾಗಲಿ, ಜೀವನದಲ್ಲಿ ಅವರು ಇನ್ನೂ ಎತ್ತರಕ್ಕೆ ಏರಲಿ, ಎಲ್ಲವೂ ಒಳ್ಳೆಯದಾಗಲಿ ಎಂದು ನಾವೆಲ್ಲ ದೇವರ ಬಳಿ ಪ್ರಾರ್ಥಿಸುತ್ತೇವೆ ಎಂದು ಹೇಳಿ ಕಿಚ್ಚ ಸುದೀಪ್ ರವರಿಗೆ ಹುಟ್ಟುಹಬ್ದದ ಶುಭಾಶಯ ಕೋರಿದರು.


ಈ ಸಂದರ್ಭದಲ್ಲಿ ಗೋವಾ ಕಿಚ್ಚ ಸುದೀಪ ಅಭಿಮಾನಿ ಬಳಗದ ಉಪಾಧ್ಯಕ್ಷ ಸಮೀರ್, ಕಾರ್ಯದರ್ಶಿ ವಿಶ್ವನಾಥ, ಪ್ರಧಾನ ಕಾರ್ಯದರ್ಶಿ ಶ್ರೀಧರ್, ಸದಸ್ಯರಾದ ಹನುಮಂತ, ಪ್ರಶಾಂತ, ಅಭಿಷೇಕ, ಕೆಡೆಪ್ಪ, ರಮೇಶ್ ಕುಮಾರ್, ಸೇರಿದಂತೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಿಚ್ಚನ ಹುಟ್ಟು ಹಬ್ಬವನ್ನು ಸಂಭ್ರಮಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top