ಗೃಹರಕ್ಷಕದ ದಳ: ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿ ನೇಮಕ

Upayuktha
0


ಮಂಗಳೂರು: ಹಿರಿಯ ಗೃಹರಕ್ಷಕ ಅಣ್ಣು ಬಿ. ಅಸಿಸ್ಟೆಂಟ್ ಸೆಕ್ಷನ್ ಲೀಡರ್, ಉಪ್ಪಿನಂಗಡಿ ಘಟಕ ಅವರನ್ನು ಗೃಹರಕ್ಷಕ ದಳದ ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ನೇಮಿಸಿ ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಜಿಲ್ಲಾ ಕಛೇರಿಯಿಂದ ಪ್ರಮಾಣ ಪತ್ರವನ್ನು ಮಂಗಳವಾರ (ಸೆ.10) ಹಸ್ತಾಂತರಿಸಿದರು.


ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿಗಳಾಗಿ ಕೆಲಸ ನಿರ್ವಹಿಸುತ್ತಿದ್ದ ದಿನೇಶ್ ಬಿ. ಇವರು ವೈಯಕ್ತಿಕ ಕಾರಣದಿಂದಾಗಿ ಪ್ರಭಾರ ಘಟಕಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿರುವುದರಿಂದ ಅವರನ್ನು ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನೇಮಿಸಿ ಜಿಲ್ಲಾ ಕಛೇರಿಯಿಂದ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕದಳದ ಕಛೇರಿ ಅಧೀಕ್ಷಕರಾದ ಚಂದ್ರು, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಎ., ಶ್ರೀಮತಿ ಮಂಜುಳಾ ಮತ್ತು ಉಪ್ಪಿನಂಗಡಿ ಘಟಕದ ಸಾರ್ಜೆಂಟ್ ರಾಮಣ್ಣ ಆಚಾರ್, ಗೃಹರಕ್ಷಕಿಯರಾದ ಶ್ರೀಮತಿ ಸುಲೋಚನಾ, ನಿಶಾ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top