ಉಡುಪಿ: ತಿರುಮಲ ಕ್ಷೇತ್ರದಲ್ಲಿ ಲಡ್ಡೂ ಪ್ರಸಾದದಲ್ಲಿ ನಡೆದಿರುವ ಕಲಬೆರಕೆಯ ಘಟನೆ ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು ಹಾಗೂ ಶ್ರೀ ಭಂಡಾರಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಹಿಂದೂ ಧರ್ಮೀಯರ ಅತ್ಯಂತ ಪ್ರಮುಖ ಶ್ರದ್ಧಾಕೇಂದ್ರವಾದ ತಿರುಪತಿಯ ಶ್ರೀ ವೇಂಕಟೇಶ್ವರ ದೇವರ ಪರಮ ಪಾವನವಾದ ನೈವೇದ್ಯ ಪ್ರಸಾದವನ್ನು ಕಲಬೆರಕೆಯ ತುಪ್ಪವನ್ನು ಮಿಶ್ರಣ ಮಾಡುವ ಮೂಲಕ ದೊಡ್ಡ ಅಪಚಾರವನ್ನು ಮಾಡಲಾಗಿದೆ. ಈ ಮೂಲಕ ಬಹು ದೊಡ್ಡ ಧಾರ್ಮಿಕ ಸಮಾಜವನ್ನು ಘಾಸಿಗೊಳಿಸಿದ್ದು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ ಅಪರಾಧವಾಗಿದೆ.
ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು. ಸನಾತನ ಧರ್ಮದ ಸಂರಕ್ಷಣೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂತರ ಪೀಠಾಧಿಪತಿಗಳ ನೇತೃತ್ವದ ಮಾರ್ಗದರ್ಶಕ ಮಂಡಳಿಯನ್ನು ರಚಿಸಬೇಕು. ಯಾವುದೇ ಕಾರಣಕ್ಕೂ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.
ಶ್ರೀ ಭಂಡಾರಿಕೇರಿ ಮಠಾಧೀಶರಿಂದ ಖಂಡನೆ:
ತಿರುಪತಿಯಲ್ಲಿ ಶ್ರೀನಿವಾಸನ ಸನ್ನಿಧಿಯಲ್ಲಿ ನಡೆದಿರುವ ಅಪಚಾರವನ್ನು ತೀವ್ರವಾಗಿ ಖಂಡಿಸಿ ಧರ್ಮ ಸಂಸತ್ ಅನ್ನು ರಚಿಸಿ ಆ ಮೂಲಕ ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಬೇಕು ಎಂದು ಶ್ರೀ ಭಂಡಾರಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ತಿಳಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ