ಬಂಟ್ವಾಳ: ಇತ್ತೀಚಿನ ಬದಲಾದ ಸನ್ನಿವೇಶದಲ್ಲಿ ಮಹಿಳೆಯರು ಸಾರ್ವಜನಿಕ ಹುದ್ದೆಯನ್ನು ಬಯಸದೇ ಯಾವುದಾದರೊಂದು ಉದ್ಯೋಗದ ಮೂಲಕ ಸ್ವಾಭಿಮಾನದ ಬದುಕು ನಿರ್ಮಿಸಬೇಕು. ಸ್ವಾತಂತ್ರ್ಯ ಗಳಿಸುವುದಕ್ಕೋಸ್ಕರ ಹಲವಾರು ಕ್ರಾಂತಿಕಾರಿ ಹೋರಾಟಗಾರರ ಶ್ರಮದ ಹಿಂದೆ ಮಹಿಳಾ ಶಕ್ತಿಯ ಪ್ರೇರಣೆ ಅಡಗಿದೆ. ದೇಶದ ಸಂಸ್ಕೃತಿ ಮತ್ತು ಸಂಸ್ಕಾರ, ಆಧ್ಯಾತ್ಮಿಕತೆಯನ್ನು ಉಳಿಸಿಕೊಳ್ಳಲು ಸ್ತ್ರೀ ಶಕ್ತಿಯ ಪಾತ್ರ ಮಹತ್ತರವಾದುದು, ಮಹಿಳೆ ಒಟ್ಟು ಸಮಾಜದ ಕೊಂಡಿಯಾಗಿ ಕೆಲಸ ನಿರ್ವಹಿಸುವುದರಿಂದ ದೇಶ ಅಭಿವೃದ್ಧಿಗೊಳ್ಳಲು ಸಾಧ್ಯವಾಗಿದೆ ಎಂದು ರಾಷ್ಟ್ರ ಸೇವಿಕಾ ಸಮಿತಿಯ ದಕ್ಷಿಣ ಪ್ರಾಂತ ಸಹ ಬೌದ್ದಿಕ್ ಪ್ರಮುಖ್ ಹಾಗೂ ವಿವೇಕಾನಂದ ವಿದ್ಯಾ ವರ್ಧಕ ಸಂಘದ ಸಂಸ್ಕಾರ ಪರಿವೀಕ್ಷಣ ಪ್ರಮುಖ್ ಮೀನಾಕ್ಷಿ ಭಗಿನಿ ರಾಯಿ, ಮಹಿಳೆಯರಿಗೆ ಕಿವಿಮಾತು ಹೇಳಿದರು.
ಅವರು ಶನಿವಾರ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಇವರ ವತಿಯಿಂದ ನಡೆಸಲ್ಪಡುವ ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ ಮಂಗಳೂರು, ಸಿಸಿಟೆಕ್ ಮಂಗಳೂರು, ರೋಟರಿ ಕ್ಲಬ್, ಲೊರೆಟ್ಟೊ ಹಿಲ್ಸ್, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಇವುಗಳ ಸಹಕಾರದಲ್ಲಿ ಸಿದ್ದಕಟ್ಟೆ ಸಹಕಾರ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಟೈಲರಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ನಮಗಿರುವ ಹಕ್ಕುಗಳ ಬಗ್ಗೆ ಮಾತಾನಾಡದೇ ದೇಶಕ್ಕಾಗಿ ನಮ್ಮ ಜವಾಬ್ದಾರಿಗಳು ಏನು ಎಂದು ಚಿಂತಿಸಬೇಕಾದ ಅನಿರ್ವಾಯ ಪರಿಸ್ಥಿತಿಯ ಕಾಲಘಟ್ಟದಲ್ಲಿ ಮಹಿಳೆಯರ ಶಕ್ತಿಯು ಸಬಲೀಕರಣಗೊಂಡಾಗ ಶೀಘ್ರವೇ ನಮ್ಮ ದೇಶವು ಪರಮ ವೈಭವದತ್ತ ಸಾಗಲಿದೆ ಎಂದು ಅವರು ನುಡಿದರು.
ಮುಖ್ಯ ಅತಿಥಿಯಾಗಿ ಮಾತಾನಾಡಿದ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ನ ಅಧ್ಯಕ್ಷ ರೋ. ಸುರೇಶ್ ಶೆಟ್ಟಿ ಮಾತಾನಾಡಿ, ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ಟೈಲರ್ ಗಳು ಹೆಚ್ಚಿನ ತರಬೇತಿಯೊಂದಿಗೆ ಪರಿಣಿತರಾಗುವುದರೊಂದಿಗೆ ಜನರಿಗೆ ಆಕರ್ಷಿತರಾಗಬೇಕೆಂದರು. ತರಬೇತಿ ಪಡೆದುಕೊಂಡ ಅಭ್ಯರ್ಥಿಗಳಲ್ಲಿ ಅರ್ಹರಾಗಿರುವ 4-5 ಜನರಿಗೆ ಟೈಲರಿಂಗ್ ಮಿಷನ್ ಖರೀದಿಸಲು ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ವತಿಯಿಂದ ಸಹಕಾರ ನೀಡಲಾಗುವುದು ಎಂದು ಪ್ರಕಟಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತಾನಾಡಿ, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕಳೆದ 5 ವರ್ಷಗಳಿಂದ ಕೃಷಿ ಸಾಲದೊಂದಿಗೆ ಇತರ ಸೌಲಭ್ಯಗಳನ್ನು ನೀಡುವುದರೊಂದಿಗೆ ವಿವಿಧ ಕ್ಷೇತ್ರಗಳ ಅಭಿವೃದ್ದಿಗೆ ಸಹಕಾರ ನೀಡುತ್ತಾ ಬಂದಿದ್ದು, ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬನೆಯ ಜೀವನ ನಿರ್ವಹಣೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನಮ್ಮ ಸಹಕಾರ ಸಂಘದ ವತಿಯಿಂದ ರೋಟರಿ ಕ್ಲಬ್ ಗಳ ಸಹಕಾರದೊಂದಿಗೆ ಉಚಿತವಾಗಿ ಟೈಲರಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ಸೇರಿದಂತೆ ವಿವಿಧ ಕೋರ್ಸುಗಳ ತರಬೇತಿಗೆ ಉತ್ತೇಜನ ನೀಡಲಾಗುತ್ತಿದೆ. ತರಬೇತಿ ಪಡೆದ ಆಶಕ್ತರಿಗೆ ಟೈಲರಿಂಗ್ ಮಿಷನ್ ಖರೀದಿಸಲು ಸಂಘದ ವತಿಯಿಂದ ರಿಯಾಯಿತಿ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದರು.
ಸಮಾರಂಭದಲ್ಲಿ ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನ ಕುಮಾರ್ ಚೌಟ, ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ .ಗಿರೀಶ್ ಭಟ್ ಅಜಕ್ಕಳ, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಅಧ್ಯಕ್ಷ ರೋII ಶಿವಯ್ಯ ಎಲ್, ಬಂಟ್ವಾಳ ತಾಲೂಕು ಟೈಲರ್ ಅಸೋಸಿಯೇಷನ್ ಅಧ್ಯಕ್ಷ ನಾಗೇಶ್ ಎಂ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಕುಲಾಲ್, ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ, ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಟೈಲರಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ತರಬೇತುದಾರರಾದ ಕು. ಪ್ರೇಮಾ, ರೋಟರಿ ಕ್ಲಬ್ ನ ಕಾರ್ಯದರ್ಶಿ ರೋ.I ರಾಜೇಶ್ ಶೆಟ್ಟಿ ಸೀತಾಳ, ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರೋII ರಾಘವೇಂದ್ರ ಭಟ್, ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ದಾಮೋದರ ಪೂಜಾರಿ, ಶಕುಂತಲಾ, ಶಾಂತ, ವಿದ್ಯಾ, ಹೇಮಲತಾ, ,ಸಂಘದ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್,ಅರುಣಾ ಎಸ್ ಶೆಟ್ಟಿ, ಮಾಧವ ಶೆಟ್ಟಿಗಾರ್, ಹರೀಶ್ ಆಚಾರ್ಯ ಉಪಸ್ಥಿತರಿದ್ದರು,
ಸಂಘದ ನಿದೇಶಕ ಸಂದೇಶ್ ಶೆಟ್ಟಿ ಪೊಡುಂಬ ಸ್ವಾಗತಿಸಿ, ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ವಂದಿಸಿ, ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ