ಪಿಲಿಕುಳದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ಕಂಬಳ ತುಳುನಾಡ ಉತ್ಸವ: ಯು.ಟಿ. ಖಾದರ್

Upayuktha
0


ಬೆಂಗಳೂರು: ಪಿಲಿಕುಳ ನಿಸರ್ಗ ಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳುನಾಡ ಉತ್ಸವವನ್ನು ಎಲ್ಲರ  ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲು ಸ್ಪೀಕರ್ ಯು.ಟಿ. ಖಾದರ್ ಸಲಹೆ ನೀಡಿದ್ದಾರೆ.


ಅವರು ಗುರುವಾರ ವಿಧಾನ ಸಭಾ ಕಚೇರಿಯ ಸಭಾಂಗಣದಲ್ಲಿ ಪಿಲಿಕುಳ ಕಂಬಳ, ತುಳು ನಾಡ ಉತ್ಸವದ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.


ಪಿಲಿಕುಲದಲ್ಲಿ  ಕೆಲವೊಂದು ಶಾಶ್ವತವಾದ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿ ಪಡಿಸಲು ಸಂಘಟಿತ ಪ್ರಯತ್ನ ನಡೆಸಲು ತುಳುನಾಡು ಉತ್ಸವದ ಮೂಲಕ ತುಳು ನಾಡಿನ ಕಂಬಳ ಸೇರಿದಂತೆ ಕಲೆ, ಸಂಸ್ಕೃತಿಕ ಕಾರ್ಯಕ್ರಮ ವಸ್ತು ಪ್ರದರ್ಶನಗಳು ಕೃಷಿ ಮೇಳಗಳು ಆಹಾರ ಮೇಳಗಳ ಮೂಲಕ ಚಾಲನೆ ನೀಡುವ ಚಿಂತನೆ ಇದೆ.ಈ ಬಗ್ಗೆ ಸಂಸದರು ಶಾಸಕರು ಅಧಿಕಾರಿಗಳು ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಮಾಲೋಚನೆ ಸಲಹೆ ಸೂಚನೆಗಳನ್ನು ಪಡೆದು ಕಾರ್ಯ ಕ್ರಮ ರೂಪಿಸಲಾಗುವುದು. ಇದಕ್ಕೆ ಪೂರಕವಾಗಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಜಿಲ್ಲಾ ಮಟ್ಟದ ಅಧಿಕಾರಿಗಳು ಇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ ಕಾರ್ಯ ಯೋಜನೆ ರೂಪಿಸಲು ಯು.ಟಿ.ಖಾದರ್ ಸಲಹೆ ನೀಡಿದರು‌.


ಇದರಿಂದ ಪಿಲಿಕುಳಕ್ಜೆ ಸಾಕಷ್ಟು ಮಂದಿ ಪ್ರವಾಸಿಗರು, ವಿದ್ಯಾರ್ಥಿಗಳು ಭೇಟಿ ನೀಡಿ ನಿಸರ್ಗ ಧಾಮದ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ ಎಂದು ಯು.ಟಿ. ಖಾದರ್ ವಿವರಿಸಿದರು.


ತುಳುನಾಡು ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್‌ನಲ್ಲಿ ಈ ಉತ್ಸವಕ್ಕೆ ಅನುದಾನ ನಿಗದಿ ಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.


ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡುತ್ತಾ, ಪಿಲಿಕುಳದ ಅಭಿವೃದ್ಧಿ ಹಾಗೂ ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಒಳ್ಳೆಯ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದರು, ಶಾಸಕರು ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಂಸದ ಬೃಜೇಶ್ ಚೌಟ ಮಾತನಾಡಿ ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು.


ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಅಶೋಕ್ ಕುಮಾರ್ ರೈ, ಡಾ.ಮಂಜುನಾಥ ಭಂಡಾರಿ, ಐವನ್ ಡಿ ಸೋಜ, ಭೋಜೇ ಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top