ಮನೋರಮಾ ಎಂ.ಭಟ್ ನಿಧನಕ್ಕೆ ದ.ಕ ಜಿಲ್ಲಾ ಕ.ಸಾ.ಪ ಸಂತಾಪ

Upayuktha
0

ಮನೋರಮಾ ಎಂ ಭಟ್ ನಿಧನ


ಮಂಗಳೂರು: ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ.ಭಟ್ ರಂಗಭೂಮಿ ಹಾಗೂ ಕನ್ನಡ ಸಾರಸ್ವತ ಲೋಕಕ್ಕೆ ಶ್ರೇಷ್ಠ ಕೊಡುಗೆ ನೀಡುವುದರ ಮೂಲಕ ಜನ ಮಾನಸದಲ್ಲಿ ಚಿರ ಸ್ಥಾಯಿಯಾಗಿದ್ದಾರೆ.


ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸ್ಥಾಪಕ ಸದಸ್ಯರಲ್ಲೊಬ್ಬರಾಗಿದ್ದು, ಬಳಿಕ ಅಧ್ಯಕ್ಷರೂ ಆಗಿದ್ದರು. ಮಹಿಳೆಯರ ಶೊಷಣೆ ಮತ್ತು ಮೂಢನಂಬಿಕೆಗಳ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಿದವರು.


ಮಂಗಳೂರು ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಾಹಿತ್ಯ ಮಾತ್ರವಲ್ಲದೆ ವಿವಿಧ ಚಟುವಟಿಕೆಯಲ್ಲಿ ಕೊನೆಯವರೆಗೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.


ಇವರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ ಅವರು ಸಂದೇಶದಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top