ಕಾಸರಗೋಡು: ವಿಕಾಸ ಟ್ರಸ್ಟ್ ವತಿಯಿಂದ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನದ 2ನೇ ಹಂತದ ಉದ್ಘಾಟನೆ ಸಮಾರಂಭ ಸೆ.28ರಂದು ಶನಿವಾರ ಅಪರಾಹ್ನ 4:00 ಗಂಟೆಗೆ ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯಲ್ಲಿ ಜರಗಲಿದೆ.
ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಲಿದ್ದು ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಶರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿಲ್ಪಾ ದ್ಯಾವಯ್ಯ (ಐಪಿಎಸ್) ಭಾಗವಹಿಸಲಿದ್ದಾರೆ. ಬೇಳ ಶೋಕಮಾತಾ ಚರ್ಚ್ ಧರ್ಮಗುರುಗಳಾದ ರೆ.ಫಾ ಸ್ಟೇನಿ ಪಿರೇರಾ ಶುಭಾಶಂಸನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ಸತ್ಯನಾರಾಯಣ ಬೆಳೇರಿ ಅವರಿಗೆ ಸನ್ಮಾನ ಕಾರ್ಯಕ್ರಮವಿದೆ.
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ವ್ಯವಸ್ಥಾಪಕರಾದ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಸರಗೋಡು ಜಿಲ್ಲೆಯ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿಕಾಸ ಟ್ರಸ್ಟ್ ಅಧ್ಯಕ್ಷ ರವಿನಾರಾಯಣ ಗುಣಾಜೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


