ಸೆ.29ರಂದು ಕೋಟಿ ಗಾಯತ್ರಿ ಜಪಯಜ್ಞ ಸಂಕಲ್ಪ ದಿನ

Upayuktha
0


ಮಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಸಮಿತಿ ಹಾಗೂ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಜಂಟಿಯಾಗಿ ಮಂಗಳೂರಿನ ಚಿತ್ರಾಪುರ ಮಠದ ಸಹಕಾರದೊಂದಿಗೆ ಅ. 26 ಮತು 27ರಂದು ನಡೆಸಲು ಉದ್ದೇಶಿಸಿದ ಗಾಯತ್ರಿ ಸಂಗಮ ಸಾಂಘಿಕ ಕೋಟಿ ಗಾಯತ್ರೀ ಜಪಯಜ್ಞದ ಪೂರ್ವಾಭಾವಿಯಾಗಿ ಸೆ. 29ನೇ ಭಾನುವಾರ ಬೆಳಗ್ಗೆ 10.00 ಗಂಟೆಗೆ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಾನದಲ್ಲಿ ಸಂಕಲ್ಪ ದಿನ ಆಯೋಜಿಸಲಾಗಿದೆ.


ಇದೇ ವೇಳೆ ಮಾತೆಯರು ಸರ್ವಮಂಗಳ ಮಾಂಗಲ್ಯ ಸ್ತೋತ್ರ ಪಠಣ ಸಂಕಲ್ಪ ಮಾಡಲಿದ್ದಾರೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬ್ರಾಹ್ಮಣ ಸಮುದಾಯದ ಎಲ್ಲ ಜ್ಞಾನಿಗಳು, ವಿದ್ವಾಂಸರು, ವಿಪ್ರರು, ಮುಂದಾಳುಗಳು, ಹಿರಿಯರು, ಯುವಸಮುದಾಯ, ಮಕ್ಕಳು, ಮಹಿಳೆಯರು ಹೀಗೆ ಎಲ್ಲರೂ ಸೇರಿ ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮತೇಜದ ಬೆಳಕಲಿ ಎಂಬ ಸದಾಶಯದೊಂದಿಗೆ ಕಡಲ ಕಿನಾರೆ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಕೋಟಿ ಗಾಯತ್ರಿ ಜಪಯಜ್ಞ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.


ಪೂರ್ವಭಾವಿಯಾಗಿ ನಡೆಯುವ ಸಂಕಲ್ಪ ದಿನದಂದು ರಾಜ್ಯ ಧಾರ್ಮಿಕ ಪರಿಷತ್‌ನ ಮಾಜಿ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಆಶಯ ಭಾಷಣ ಮಾಡಲಿದ್ದಾರೆ.


ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ನ್ಯಾಯವಾದಿ ಮಹೇಶ್ ಕಜೆ ಅವರು ಮಹಾಸಭಾದ ಧ್ಯೇಯ ಉದ್ದೇಶಗಳನ್ನು ಜನರಿಗೆ ತಿಳಿಸಲಿದ್ದಾರೆ.


ಯಾಗ ಸಮಿತಿಯ ಸಂಚಾಲಕ ಕಟೀಲಿನ ಅನುವಂಶಿಕ ಅರ್ಚಕ ಶ್ರೀಹರಿ ನಾರಾಯಣ ದಾಸ ಆಸ್ರಣ್ಣ ಅವರು ಯಜ್ಞದ ಬಗ್ಗೆ ಮಾಹಿತಿ ನೀಡಲಿರುವರು.


ಶರವು ಕ್ಷೇತ್ರದ ಶಿಲೆಶಿಲೆ ಆಡಳಿತ ಮೊಕ್ತೇಸರ ಶರವು ಶ್ರೀ ರಾಘವೇಂದ್ರ ಶಾಸ್ತ್ರಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಆಡಳಿತ ಮೊಕ್ತೇಸರ ವೇ.ಮೂ. ವಾಸುದೇವ ಆಸ್ರಣ್ಣರು, ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳು, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ಕರ್ನಾಟಕ ಬ್ಯಾಂಕಿನ ನಿಕಟ ಪೂರ್ವ ಅಧ್ಯಕ್ಷರಾದ ಎಂ.ಎಸ್. ಮಹಾಬಲೇಶ್ವರ ಭಟ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ವೇದಮೂರ್ತಿ ಕೃಷ್ಣ ಭಟ್ ಪಾವಂಜೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಾಲಯದ ಅರ್ಚಕರು, ಜಿಲ್ಲೆಯ ಎಲ್ಲ ಪುರೋಹಿತರು, ಸಹಾಯಕ ಪುರೋಹಿತರು, ಸಂಸ್ಕೃತ ಶಿರೋಮಣಿಗಳು, ವೇದಜ್ಞರು ಭಾಗವಹಿಸಲಿರುವರು.


ಕೋಟಿ ಗಾಯತ್ರಿ ಜಪಯಜ್ಞ ಯಶಸ್ವಿಗಾಗಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬ್ರಾಹ್ಮಣ ಸಮುದಾಯ ಸಂಕಲ್ಪ ಮಾಡಿ ಜಪ ಆರಂಭಿಸಿರುತ್ತಾರೆ. ಯಶಸ್ವಿಗಾಗಿ ಹಲವು ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top