ಮಂಗಳೂರು: ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು.
ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು.
ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. 'ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ' ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಮಹೇಶ್ ಕಜೆ ಹೇಳಿದರು.
ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು.
ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.29ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ 500 ಜನ ಬಾಂಧವರು ಸೇರಬೇಕು ಎಂದರು.
ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.
ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ