ಉಜಿರೆ ಎಸ್‌ಡಿಎಂ ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮ

Upayuktha
0


ಉಜಿರೆ:  ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಇಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಲ್ಯಾಬಿನ್ ಕ್ಯಾಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮದಲ್ಲಿ ಸೂಕ್ಷ್ಮದರ್ಶಕದ ಮೂಲಕ ಏಕದಳ ದ್ವಿದಳ ಸಸ್ಯದ ಒಳ ವಿನ್ಯಾಸವನ್ನು ವಿದ್ಯಾರ್ಥಿಗಳು ವೀಕ್ಷಿಸಿದರು. ಇದಲ್ಲದೆ ಸಸ್ಯ ಶಾಸ್ತ್ರದ ಹಲವಾರು ಕೌತುಕ ಮೂಡಿಸುವಂತಹ ಪ್ರಯೋಗಗಳನ್ನು ವಿದ್ಯಾರ್ಥಿಗಳ ಸಭೆಯಲ್ಲಿ ಪ್ರದರ್ಶಿಸಲಾಯಿತು.


ಈ ಕಾರ್ಯಕ್ರಮವನ್ನು ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ.ಎಸ್. ಹಾಗೂ ಭವ್ಯ ಇವರು ಮಾರ್ಗದರ್ಶಿಸಿದರು. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿಯರಾದ ಪದ್ಮಶ್ರೀ ಹಾಗೂ ಮೇಘ ಇವರೂ ಸಹಕರಿಸಿದರು.


ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಇವರು ಸಂಪೂರ್ಣ ಸಹಕಾರವನ್ನು ನೀಡಿದರು. 163 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top