ಎಸ್‌ಡಿಎಂ ಇಂಗ್ಲಿಷ್‌ ಮೀಡಿಯಂ ಶಾಲೆಯಲ್ಲಿ ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮ

Upayuktha
0

ಉಜಿರೆ ಎಸ್‌ಡಿಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜನೆ



ಉಜಿರೆ: ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಇಲ್ಲಿನ ಒಂಭತ್ತನೆಯ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮದಲ್ಲಿ ಏಕದಳ ಹಾಗೂ ದ್ವಿದಳ ಸಸ್ಯದ ಕಾಂಡದ ಒಳ ರಚನೆಯನ್ನು, ಸಸ್ಯ ಅಂಗಾಂಶಗಳ ವಿಧಗಳನ್ನು ಮತ್ತು ಪತ್ರ ರಂಧ್ರದ ರಚನೆಯನ್ನು ಸೂಕ್ಷ್ಮದರ್ಶಕದ ಸಹಾಯದಿಂದ ವಿವರಿಸಲಾಯಿತು. ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹಲವಾರು ಕುತೂಹಲಕಾರಿ ಪ್ರಯೋಗಗಳನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.


ಈ ಕಾರ್ಯಕ್ರಮವನ್ನು ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯರಾದ ಕುಮಾರಿ ಮಂಜುಶ್ರೀ ಕೆ ಹಾಗೂ ಕುಮಾರಿ ಭವ್ಯ ಡಿ ನಾಯಕ್ ಇವರು ನಡೆಸಿಕೊಟ್ಟರು. ಈ ಕಾರ್ಯಕ್ರಮಕ್ಕೆ ತೃತೀಯ ಬಿ.ಎಸ್ಸಿ ವಿದ್ಯಾರ್ಥಿನಿಯರಾದ ಸಂಜನಾ, ಅನನ್ಯ, ಲಾವಣ್ಯ ಹಾಗೂ ಸುರಕ್ಷಾ ಇವರೂ ಸಹಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಹಾಗೂ ವಿಜ್ಞಾನ ಶಿಕ್ಷಕಿಯರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಸುಮಾರು 150 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top