ಮಂಗಳೂರು: ಸ್ಫೂರ್ತಿದಾಯಕವಾದ ಡಾ ಅಂಬೇಡ್ಕರ್ ಪ್ರತಿಮೆಯೊಂದಿಗೆ ಆಕರ್ಷಕ ಅಂಬೇಡ್ಕರ್ ವೃತ್ತ ನಿರ್ಮಾಣದ ನಕ್ಷೆ- ವಿನ್ಯಾಸವನ್ನು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಈ ಯೋಜನೆಯ ಪ್ರಾಯೋಜಕತ್ವ ವಹಿಸಿಕೊಂಡಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆಡಳಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ ಮಣಿಮೇಖಲಾಯ್ ಅವರಿಗೆ ನೀಡಿ, ಈ ಯೋಜನೆಯನ್ನು ಅತೀ ಶೀಘ್ರದಲ್ಲಿ ಅನುಷ್ಠಾನ ಮಾಡಿ ಡಿ. 6ರಂದು ಉದ್ಘಾಟನೆ ಮಾಡಲು ಅನುವು ಮಾಡಿ ಕೊಡಬೇಕು ಎಂದು ಕೋರಿದರು.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಸ್ಥಳೀಯ ಕಾರ್ಪೋರೇಟರ್ ಎ ಸಿ ವಿನಯಚಂದ್ರ, ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಭರತ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಲಯ ಮುಖ್ಯಸ್ಥೆ ಶ್ರೀಮತಿ ರೇಣು ನಾಯರ್, ಡಿಜಿಎಂ, ಎ ರಾಜಮಣಿ, ಎಜಿಎಂ, ಎನ್ ಗೋಪಿನಾಥ್, ಕಾರ್ಪೋರೇಟರ್ ಮನೋಜ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧ ಪಡಿಸಿರುವ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ, ನಗರದ ನಾಗರಿಕ ಸಂಘಟನೆಗಳ ಮುಖಂಡರಾದ ಯೋಗೀಶ್ ಶೆಟ್ಟಿ ಜೆಪ್ಪು, ಮೋಹನಾಂಗಯ್ಯ ಸ್ವಾಮಿ, ರಘು ಎಕ್ಕಾರ್, ಲಕ್ಷ್ಮಣ್ ಕಾಂಚನ್, ಕಾಂಗ್ರೆಸ್ ನಾಯಕ ಪಿ ವಿ ಮೋಹನ್, ಮಾಜಿ ಶಾಸಕ ಜೆ ಆರ್ ಲೋಬೊ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ