ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನ ಮಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ

Upayuktha
0




ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 74ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಪಕ್ಷದ ವತಿಯಿಂದ ಹಾಗೂ ಮೋದಿ ಅವರ ಅಭಿಮಾನಿಗಳು ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.



ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ರಕ್ತದಾನ ಶಿಬಿರದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೂಡ ಪಾಲ್ಗೊಂಡು ಬೇರೆಯವರ ಜೀವಕ್ಕೆ ನೆರವಾಗುವ ನಿಟ್ಟಿನಲ್ಲಿ ರಕ್ತದಾನ ಮಾಡಿದ್ದಾರೆ. ಈ ವೇಳೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಮತ್ತು ಪ್ರಸನ್ನ ಮಾರ್ತ, ಕಾರ್ಯಕರ್ತರು ಹಾಗೂ ಮುಖಂಡರು ಜತೆಗಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top