ಮಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ ತಮ್ಮ ಕಚೇರಿಯಲ್ಲಿ ನಡೆಸಲು ಉದ್ದೇಶಿಸಿದ್ದ ಸಾರ್ವಜನಿಕರ ಭೇಟಿ ಕಾರ್ಯಕ್ರಮವನ್ನು ಪಕ್ಷದ ಕಚೇರಿಗೆ ಸ್ಥಳಾಂತರಿಸಲಾಗಿದೆ.
ಅದರಂತೆ ಸಾರ್ವಜನಿಕರು, ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಂಗಳೂರಿನ ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕ್ಯಾ. ಚೌಟ ಅವರನ್ನು ಭೇಟಿ ಮಾಡಿ ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು. ಜನರು ಈ ಬದಲಾವಣೆಯನ್ನು ಗಮನಿಸಬೇಕೆಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ