ಮಂಗಳೂರು: ದ.ಕ.ಜಿ. ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮರಕಡ, ಕುಂಜತ್ತಬೈಲ್ ಇಲ್ಲಿ ನೂತನ ಆಂಗ್ಲ ಮಾಧ್ಯಮ ಒಂದನೇ ತರಗತಿಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು. ಸರಕಾರಿ ಸೇವೆಯಿಂದ ನಿವೃತ್ತ ರಾಗುತ್ತಿರುವ ಶಾಲಾ ಶಿಕ್ಷಕಿ ಜುಡಿತ್ ವೇಗಸ್ ರವರನ್ನು ಬೀಳ್ಕೊಟ್ಟು ಶಾಸಕರು ಶುಭ ಕೋರಿದರು.
ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಮ.ನ.ಪಾ ಸದಸ್ಯ ಶರತ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಸಾಲಿಯಾನ್, ಕಾರ್ಯದರ್ಶಿ ರೆಹಮಾನ್ ಖಾನ್ ಕುಂಜತ್ತಬೈಲ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರೋಸ್ಲೀನ್, ಮುಲ್ಲಕ್ಕಾಡು ಶಾಲೆಯ ಮುಖ್ಯೋಪಾಧ್ಯಾಯ ಉಸ್ಮಾನ್, ಡಾ.ಡೋನಾಲ್ಡ್ ಲೋಬೋ, ಮುಂತಾದವರು ಉಪಸ್ಥಿತರಿದ್ದರು, ನಿವೃತ್ತ ಶಿಕ್ಷಕಿ ಜುಡಿತ್ ವೇಗಸ್ ರವರನ್ನು ಅಭಿನಂದಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನೊ ಪ್ರಾಸ್ತಾವಿಸಿದರು. ಮುಖ್ಯ ಶಿಕ್ಷಕಿ ನೇತ್ರಾವತಿ ಸ್ವಾಗತಿಸಿದರು. ಶಾಲಾ ಶಿಕ್ಷಕಿಯರಾದ ಶೋಭಾ ವಂದಿಸಿದರು. ಮರೀನಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ