ಪ್ರವಾಸೋದ್ಯಮ ಸಂಸ್ಕೃತಿಯ ಆಗರ: ನಾಗೇಶ್ ಶೆಟ್ಟಿ

Upayuktha
0


ಮಂಗಳೂರು: ಭಾರತೀಯ ಪ್ರವಾಸೋದ್ಯಮ ಅತ್ಯಂತ ಸುರಕ್ಷಿತವಾಗಿದ್ದು, ದೇಶದ ಜಿಡಿಪಿ ಕ್ಷೇತ್ರಕ್ಕೆ ಶೇ. ಹತ್ತರಷ್ಟು ಕೊಡುಗೆ ನೀಡುತ್ತಿದೆ. ಅಲ್ಲದೇ, ದೇಶದ ಸಂಸ್ಕೃತಿಯನ್ನು ಪಸರಿಸುವಲ್ಲಿ ಉತ್ತಮ ಪಾತ್ರ ನಿರ್ವಹಿಸುತ್ತದೆ ಎಂದು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸಪ್ರೆಸ್ನ ನಿವೃತ್ತ ಸ್ಟೇಷನ್ ಮಾಸ್ಟರ್ ನಾಗೇಶ್ ಶೆಟ್ಟಿ ಹೇಳಿದರು. 


ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿಬಿಎ ಮತ್ತು ಬಿಎ ಪ್ರವಾಸೋದ್ಯಮ ವಿಭಾಗದ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರವಾಸೋದ್ಯಮ ಮತ್ತು ಶಾಂತಿ ವಿಷಯದ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 


ವಿದ್ಯಾರ್ಥಿಗಳು ಕಾಲೇಜಿನಲ್ಲಿ ಏರ್ಪಡಿಸುವ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಶಿಸ್ತಿನ ವರ್ತನೆ, ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಪ್ರವಾಸೋದ್ಯಮದ ಮೂಲಕ ದೇಶದ ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಅಗತ್ಯವಿದೆ. ಈ ಹಿಂದೆ ಅವಕಾಶಗಳ ಕೊರತೆಗಳಿದ್ದವು. ಆದರೆ ಈಗ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಅವಕಾಶಗಳಿಗೆ ಕೊರತೆಯಿಲ್ಲ. ಹಾಗಾಗಿ ಅವುಗಳನ್ನು ಸಶಕ್ತವಾಗಿ ಬಳಸಿಕೊಂಡು ಪ್ರವಾಸ ಮಾಡುವ ಮೂಲಕ ಜೀವನಾನುಭವವನ್ನು ಹೆಚ್ಚಿಸಿಕೊಳ್ಳಬೇಕಿದೆ. ಪುಸ್ತಕಗಳಿಂದ ಸಿಗುವ ಜ್ಞಾನಕ್ಕಿಂತ ಪ್ರವಾಸ ಕೈಗೊಳ್ಳುವ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್, ಪ್ರವಾಸೋದ್ಯಮದಲ್ಲಿ ಹಲವಾರು ಅವಕಾಶಗಳಿವೆ. ಆದರೆ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಪ್ರವಾಸೊಧ್ಯಮ ಪದವಿ ಪಡೆದ ನಂತರವೂ ಬೇರೆ ಬೇರೆ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳುವುದು ವಿಪರ್ಯಾಸ. ಅದರ ಬದಲಾಗಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇರುವ ಅವಕಾಶಗಳನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡು, ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ಮೂಲಕ ಪ್ರವಾಸೋದ್ಯಮ ಕ್ಷೇತ್ರವನ್ನು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಕಿವಿ ಮಾತು ಹೇಳಿದರು. 


ಬಿಬಿಎ (ಪ್ರವಾಸೋದ್ಯಮ ಮತ್ತು ನಿರ್ವಹಣೆ) ವಿಭಾಗದ ಮುಖ್ಯಸ್ಥ ಡಾ. ಜಗದೀಶ್, ಬಿಎ ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥ ಡಾ. ಶಹಬರ್ ಪಾಷ, ಪ್ರೊ. ಯತೀಶ್ ಕುಮಾರ್, ಸೇರಿದಂತೆ ಪ್ರವಾಸೊದ್ಯಮ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top