ದೇಹದ ಆರೋಗ್ಯಕ್ಕಿಂತಲೂ ಮನಸ್ಸಿನ ಆರೋಗ್ಯ ಮುಖ್ಯ: ಡಾ. ಮೇಘನಾ

Upayuktha
0


ಉಜಿರೆ: ಮನುಷ್ಯನ ಬದುಕಿನ ಅವಿಭಾಜ್ಯ ಅಂಗ ಮನಸ್ಸು. ಮನಸ್ಸು ಸ್ಥಿಮಿತದಲ್ಲಿ ಇಲ್ಲವಾದಲ್ಲಿ ಕಾಯಿಲೆ ಬರುವುದು, ಕೋಪ, ಹಠ, ಸಿಟ್ಟು ಮುಂತಾದ ಅನೇಕ ಸಮಸ್ಯೆಗಳು ಬರುವುದರಿಂದ ಜೀವನದಲ್ಲಿ ದೇಹದ ಆರೋಗ್ಯ ಕಾಪಾಡುವುದಕ್ಕಿಂತಲೂ ಮನಸ್ಸಿನ ಆರೋಗ್ಯ ಕಾಪಾಡುವುದು ಅಗತ್ಯ ಎಂದು ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಮೇಘನಾ ಅಭಿಪ್ರಾಯಪಟ್ಟರು.


ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಇಂದು (ಸೆ. 20) ಇಲ್ಲಿನ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪರೋಪಕಾರ ಮತ್ತು ನಿಸ್ವಾರ್ಥ ಸೇವೆಯಿಂದ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು. ಜೊತೆಗೆ, ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುವುದರಿಂದ ಮನಸ್ಸನ್ನು ಸ್ಥಿಮಿತದಲ್ಲಿ ಇಟ್ಟುಕೊಳ್ಳಬಹುದು ಎಂದು ಅವರು ತಿಳಿಸಿದರು.


ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ದಿವ್ಯಾ, ಸಂಗೀತ ಮತ್ತು ಸಿಂಧು ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಮ ಹಾಗೂ ಉಲ್ಲಾಸ್ ಎಂ.ಆರ್. ಯೋಗದ ಮಹತ್ವದ ಮಾಹಿತಿ ನೀಡಿದರು.


ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇಂಗ್ಲಿಷ್ ಉಪನ್ಯಾಸಕ ಸಚಿನ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top