ನಿಟ್ಟೆ: ಜೆಂಡರ್ ಸೆನ್ಸಿಟೈಸೇಶನ್ ಸೆಲ್ "ಜೆಂಡರ್ ಇಕ್ವಿಟಿ, ಇನ್ಕ್ಲೂಸಿವ್ನೆಸ್ & ಸೆನ್ಸಿಟೈಸೇಶನ್" ಎಂಬ ವಿಷಯದ ಬಗ್ಗೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 26ರಂದು ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಮ್ಮಿಕೊಂಡಿತು. ಈ ಕಾರ್ಯಕ್ರಮವು ಜೆಂಡರ್ ಸೆನ್ಸಿಟೈಸೇಶನ್ ಜಾಗೃತಿ ತರುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಯಿತು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ದೇರಳಕಟ್ಟೆಯ ಯೆನೆಪೋಯ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಸೆಂಟರ್ ಫಾರ್ ಎಥಿಕ್ಸ್ ನಿರ್ದೇಶಕಿ, ವಿಧಿವಿಜ್ಞಾನ ಔಷಧ ವಿಭಾಗದ ಪ್ರಾಧ್ಯಾಪಕಿ ಡಾ.ವಿನಾ ವಾಸ್ವಾನಿ ಅವರು ಮಹಿಳೆಯಾಗಿ ಬೆಳೆಯುತ್ತಿರುವ ಯುವತಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳನ್ನು ನಿವಾರಿಸಲು ಬೆಂಬಲ ವ್ಯವಸ್ಥೆಯನ್ನು ಕಲ್ಪಿಸುವ ಕುರಿತು ಮಾತನಾಡಿದರು.
ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಉಪ ಕುಲಸಚಿವೆ (ಮಂಗಳೂರು) ಡಾ.ಸುಮಾ ಬಲ್ಲಾಳ್ ಅವರು ಜೆಂಡರ್ ಇಕ್ವಿಟಿ ಬಗೆಗೆ ಸಭಿಕರನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಮರೀನಾ ಕೊಲಾಕೊ ಸಂಯೋಜಿಸಿದರು.
ಕಾರ್ಯಕ್ರಮದಲ್ಲಿ ಜೆಕೆಶಿಮ್ ನ ಡಾ.ಆಶಾಲತಾ, ನಿಟ್ಟೆ ನರ್ಸಿಂಗ್ ಸೈನ್ಸ್ ವಿಭಾಗದ ಸುಕೇಶ್, ನಿಟ್ಟೆ ಯುನಿವರ್ಸಿಟಿ ಸೆಂಟರ್ ಫಾರ್ ಸೈನ್ಸ್ ಎಜುಕೇಶನ್ & ರಿಸರ್ಚ್ ನ ಡಾ.ಜೂಲಿಯೆಟ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎನ್ ಎಂಎಎಂಐಟಿ, ಜೆ.ಕೆ.ಎಸ್.ಎಚ್.ಐ.ಎಂ, ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ 190 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ