ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಸಿಎ ವಿಭಾಗದ ನಿರ್ದೇಶಕಿಯಾಗಿ ಡಾ.ಜ್ಯೋತಿಮಣಿ.ಕೆ ಪದ ಸ್ವೀಕಾರ ಮಾಡಿದ್ದಾರೆ. ಇವರು ಎಂಸಿಎ ಮತ್ತು ಎಂಎಸ್‌ಸಿ ಪದವಿಯನ್ನು ಪಡೆದುಕೊಂಡು ಡಾಟಾ ಮೈನಿಂಗ್ ಹಾಗೂ ಮೆಷಿನ್ ಲರ್ನಿಂಗ್ ವಿಭಾಗದಲ್ಲಿ ಸಂಶೋಧನೆಯನ್ನು ಮಾಡಿ ಡಾಕ್ಟರೇಟ್ ಪದವಿಯನ್ನು ಗಳಿಸಿಕೊಂಡಿದ್ದಾರೆ.
ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದ ಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ. ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ