ತಿರುಪತಿ ಪ್ರಸಾದಕ್ಕೆ ಅಪಚಾರ ಅಕ್ಷಮ್ಯ: ಶ್ರೀ ಶ್ರೀ ಅಭಿನವ ಶಂಕರಭಾರತೀ ಮಹಾಸ್ವಾಮಿಗಳು

Upayuktha
0


ಶೃಂಗೇರಿ: ತಿರುಪತಿ ಪ್ರಸಾದದ ವಿಷಯದಲ್ಲಿ ಸರ್ಕಾರಿ ವ್ಯವಸ್ಥೆಯು ಮಾಡಿದ ಅಪಚಾರ ಅಕ್ಷಮ್ಯವಾಗಿದ್ದು, ಇದಕ್ಕೆ ಕಾರಣವಾಗಿರುವ ದೇವಸ್ಥಾನಗಳ ಮೇಲೆ ಇರುವ ಸರ್ಕಾರದ ಹಿಡಿತವನ್ನು ಹಿಂತೆಗೆದುಕೊಳ್ಳುವಂತೆ ಸಮಾಜವು ಒತ್ತಾಯಿಸಬೇಕಾಗಿದೆ. ಆದರೆ ಅದರ ಜೊತೆಗೆ, ಈ ಸಂದರ್ಭದಲ್ಲಿ ತಮ್ಮ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಾರ್ವಜನಿಕರು ನಡೆದಿರುವ ಅಪಚಾರಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಾಗಿದೆ ಎಂದುಕೂಡಲಿ ಶೃಂಗೇರಿ ಮಹಾ ಸಂಸ್ಥಾನದ 72ನೇ ಪೀಠಾಧಿಪತಿಗಳಾದ ಶ್ರೀ ಶ್ರೀ ಅಭಿನವ ಶಂಕರಭಾರತೀ ಮಹಾಸ್ವಾಮಿಗಳು ಹೇಳಿದ್ದಾರೆ.


ಈ ಪ್ರಾಯಶ್ಚಿತ್ತವನ್ನು ಎಲ್ಲರೂ ತಮ್ಮ ಮನೆಯಲ್ಲಿಯೇ ಸರಳವಾಗಿ ಮಾಡಿಕೊಳ್ಳುವ ವಿಧಾನವನ್ನು ಶ್ರೀಗಳು ಸಾರ್ವಜನಿಕರಿಗೆ ನೀಡಿದ್ದಾರೆ. ಈ ರೀತಿ ಪ್ರಾಯಶ್ಚಿತ್ತ ವಿಧಾನವನ್ನು ನೀಡುವುದು ಮಾತ್ರವಲ್ಲದೇ, ಮಹಾಸ್ವಾಮಿಗಳು ಸ್ವತಃ ತಾವು ಕೂಡ ಶಾಸ್ತ್ರೀಯವಾದ ಪ್ರಾಯಶ್ಚಿತ್ತ ವಿಧಾನವನ್ನು ಅನುಸರಿಸುತ್ತಿದ್ದಾರೆ.


ಇದಕ್ಕಾಗಿ ನಾಳೆಯಿಂದ ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. "ಹಿಂದೂ ಸಮಾಜವು ಸಾಮಾಜಿಕ ಜಾಗೃತಿಯ ಜೊತೆಗೆ ತಮ್ಮ ಆಧ್ಯಾತ್ಮಿಕ ಸಾಮರ್ಥ್ಯವನ್ನೂ ಹೆಚ್ಚಿಸಿಕೊಳ್ಳಲು ಇದೊಂದು ಮಾರ್ಗವಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆ. ಆದರೆ ಆ ಬಲವು ಕೇವಲ ಸಾಮಾಜಿಕ ಹಾಗೂ ರಾಜಕೀಯ ಸಂಖ್ಯಾಬಲವು ಮಾತ್ರವಲ್ಲದೇ, ಆಧ್ಯಾತ್ಮಿಕ ತಳಹದಿಯ ಮೇಲೆ ನಿರ್ಮಾಣವಾದ ಬಲವಾಗಬೇಕು. ಆಗ ಮಾತ್ರವೇ ದುಷ್ಟಶಕ್ತಿಗಳ ದಮನವು ಸಾಧ್ಯ ಎಂದು ಈ ಸಂದರ್ಭದಲ್ಲಿ ಶ್ರೀಗಳು ಸಂದೇಶ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top