ಧರ್ಮತ್ತಡ್ಕ ಪ್ರೌಢ ಶಾಲೆಯಲ್ಲಿ ಓಣಂ ಆಚರಣೆ

Upayuktha
0



ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕ ಇಲ್ಲಿನ ಪ್ರೌಢ ಶಾಲಾ ವಿಭಾಗದ ಓಣಂ ಆಚರಣೆಯು  ವಿಜೃಂಭಣೆಯಿಂದ ಜರಗಿತು. ವಿದ್ಯಾರ್ಥಿಗಳಿಗೆ ಪೂಕಳಂ ಸ್ಪರ್ಧೆಯನ್ನು ನಡೆಸಲಾಯಿತು. ಉತ್ಸವದ ಉತ್ಸುಕತೆಯ‌ನ್ನು ಹೆಚ್ಚಿಸುವುದಕ್ಕಾಗಿ ವಿವಿಧ ಜಾನಪದ ಕ್ರೀಡೆಗಳನ್ನು ಆಯೋಜಿಸಲಾಯಿತು.


ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಭಟ್ ಕಾರ್ಯಕ್ರಮಗಳಿಗೆ ಚಾಲನೆಯನ್ನಿತ್ತರು. ಮುಖ್ಯ ಶಿಕ್ಷಕರಾದ ಇ.ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪಿಟಿಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಶುಭಹಾರೈಸಿದರು. ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ದಿವ್ಯಾ ಭಾರತಿ, ಪಿಟಿಎ ಸದಸ್ಯ ಶ್ರೀಧರ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಓಣಂ ಔತಣವನ್ನು ಏರ್ಪಡಿಸಲಾಗಿತ್ತು. ರಾಮಕೃಷ್ಣ ಭಟ್ ಸ್ವಾಗತಿಸಿ, ಪ್ರದೀಪ್ ವಂದಿಸಿದರು. ಶಿವಪ್ರಸಾದ್ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top