ಮುಜುಂಗಾವು ವಿದ್ಯಾಪೀಠದಲ್ಲಿ ಓಣಂ ಹಬ್ಬದ ಆಚರಣೆ

Upayuktha
0



ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ಓಣಂ ಹಬ್ಬವನ್ನು ಹಾಗೂ ಅಧ್ಯಾಪಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ತರಗತಿಯ ಮಕ್ಕಳು ಹೂವಿನ ರಂಗೋಲಿಯನ್ನು ರಚಿಸಿದರು.


ವಿದ್ಯಾರ್ಥಿಗಳು ಹಾಗೂ ಅಧ್ಯಾಪಕವೃಂದ ಕೇರಳದ ಸಾಂಪ್ರದಾಯಿಕ ಉಡುಗೆಯೊಂದಿಗೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಓಣಂನ ವಿಶೇಷ ಔತಣ ಕೂಟವನ್ನು ನಡೆಸಲಾಯಿತು. ಭೋಜನದ ನಂತರ 10ನೇ ತರಗತಿಯ ವಿದ್ಯಾರ್ಥಿಗಳು ಅಧ್ಯಾಪಕ ದಿನದ ಅಂಗವಾಗಿ ಅಧ್ಯಾಪಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದರು. 


ಶಾಲಾ ಮುಖ್ಯ ಶಿಕ್ಷಕ ಶ್ಯಾಮ್ ಭಟ್ ದರ್ಬೆ ಮಾರ್ಗ ಮಕ್ಕಳಿಗೆ ಓಣಂ ಶುಭಾಶಯ ಹೇಳಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಮಕ್ಕಳಿಗೆ ಓಣಂ ಹಬ್ಬದ ಕುರಿತು ಸರಳವಾಗಿ ವಿವರಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ ಹಾಗೂ ರಕ್ಷಕರು, ಅಧ್ಯಾಪಕ ವೃಂದ ಉಪಸ್ಥಿತರಿದ್ದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top