ಮಂಗಳೂರು: "ಒಂದು ದೇಶ, ಒಂದು ಚುನಾವಣೆ"ಗಾಗಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು ದೇಶದ ಭವಿಷ್ಯದ ದೃಷ್ಟಿಯಿಂದ ಐತಿಹಾಸಿಕ ನಿರ್ಧಾರವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು.
ಬಹುತೇಕ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಬರಲಿದ್ದು ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆಯನ್ನು ಈಡೇರಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಅನೇಕ ವರ್ಷಗಳಿಂದ ಪದೇ ಪದೇ ಚುನಾವಣೆಗಳು ಎದುರಾಗಿ ನೀತಿ ಸಂಹಿತೆಯಿಂದ ಕಾಮಗಾರಿಗಳು ಸ್ಥಗಿತಗೊಂಡು ದೇಶದ ಪ್ರಗತಿಗೆ ಅಡ್ಡಿಯಾಗುತ್ತಿದೆ. ಕೇವಲ ರಾಜಕೀಯ ಕಾರಣಕ್ಕಾಗಿ ಇಂತಹ ಮಹತ್ವದ ನಿರ್ಧಾರವನ್ನು ವಿರೋಧಿಸುವ ಕಾಂಗ್ರೆಸ್ ನಾಯಕರು ಅವರದೇ ಕಾಲದಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿರುವ ಇತಿಹಾಸದ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದರು.
ಕೇಂದ್ರ ಸರ್ಕಾರವು ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಕೈಗೊಂಡಿರುವ ಈ ತೀರ್ಮಾನದಿಂದ ತೆರಿಗೆದಾರರ ಹಣ ಉಳಿತಾಯವಾಗುವುದರ ಜೊತೆಗೆ ಮಾನವ ಸಂಪನ್ಮೂಲದ ಸದ್ಭಳಕೆಯಾಗಲಿದ್ದು ಇಡೀ ದೇಶದ ಜನತೆ ಒಕ್ಕೊರಲಿನಿಂದ ಸ್ವಾಗತಿಸಲಿದ್ದಾರೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ