ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು (ಸೆ. 21) 2024-25ನೇ ಸಾಲಿನ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು.
ವ್ಯಕ್ತಿತ್ವ ವಿಕಸನ ತರಬೇತುದಾರ, ಪುತ್ತೂರಿನ ಅಂಬಿಕಾ ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಚಂದ್ರಕಾಂತ ಗೋರೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಸಮಯದ ಸದುಪಯೋಗ, ಒತ್ತಡ ನಿಭಾಯಿಸುವ ಸಾಮರ್ಥ್ಯ ಹಾಗೂ ಮನುಷ್ಯತ್ವ ಮತ್ತು ಮಾನವೀಯ ಮೌಲ್ಯಗಳ ಕುರಿತು ಅವರು ತಿಳಿಸಿದರು.
ವಿಕಸನ ಹಾಗೂ ಮನೋವಿಜ್ಞಾನಕ್ಕೆ ಸಂಬಂಧಿಸಿದ ವೀಡಿಯೊ ತುಣುಕುಗಳ ಮೂಲಕ ವಿದ್ಯಾರ್ಥಿನಿಯರಿಗೆ ವಿಷಯದ ಕುರಿತ ಉಪನ್ಯಾಸ ನೀಡಿದರು.
ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಶುಭ ಹಾರೈಸಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ