ಮಂಗಳೂರು: ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿಗಳ ಕುರಿತು ಜನ ಜಾಗ್ರತಿ ಮೂಡಿಸುವ ಕೆಲಸಗಳನ್ನು ಸಂಘ ಸಂಸ್ಥೆಗಳು ಮಾಡಬೇಕು. ಇದನ್ನು ಸಂಪೂರ್ಣ ನಿಯಂತ್ರಿಸಲು ಜನರ ಸಹಭಾಗಿತ್ವ ಅಗತ್ಯ ಇದೆ ಎಂದು ಹೇಳಿದರು.
ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ನೂತನವಾಗಿ ಆರಂಭಗೊಂಡ ಸ್ವಚ್ಚ ಪರಿಸರ ಪ್ರತಿಷ್ಠಾನವನ್ನು ಉದ್ಘಾಟಿಸಿ ಸ್ಪೀಕರ್ ಯು ಟಿ ಖಾದರ್ ಮಾತನಾಡಿದರು.
ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಷ್ಠಾನ ಮುತುವರ್ಜಿಯಿಂದ ಕೆಲಸ ಮಾಡಬೇಕು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳನ್ನು ಪ್ಲಾಸ್ಟಿಕ್ ಜಾಗೃತಿ ಅಭಿಯಾನದಲ್ಲಿ ತೋಡಗಿಸಿಕೊಳ್ಳುವ0ತೆ ಸಲಹೆ ನೀಡಿದರು.
ಸ್ವಚ್ಚ ಪರಿಸರ ಪ್ರತಿಷ್ಠಾನ ಟ್ರಸ್ಟಿ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ರಾಮಕೃಷ್ಣ ಮಿಷನ್ ಸ್ವಚ್ಚ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕ ರಂಜನ್ ಬೆಳ್ಳರ್ಪಾಡಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮಾಜಿ ಉಪ ಮೇಯರ್ ಸುಮಂಗಲ ರಾವ್, ಪಾಲಿಕೆ ಸದಸ್ಯ ವಿನಯರಾಜ್, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಸ0ಯೋಜನಾಧಿಕಾರಿ ಶೇಷಪ್ಪ ಅಮೀನ್, ಮಂಗಳೂರು ವಲಯ ಪಿ ಆರ್ ಓ ರೆವ್ ಡಾ ಜೆಬಿ ಸಲ್ಡಾನ್ಹಾ, ಹರೇಕಳ ಜುಮ್ಮಾ ಮಸೀದಿ ಧರ್ಮ ಗುರುಗುರು ಹಫಿಲ್ ಯಾಕೂಬ್ ಸಹಿದಿ ಉಪಸ್ಥಿತರಿದ್ದರು.
ಪುಷ್ಪರಾಜ್ ಸ್ವಾಗತಿಸಿ ವಂದಿಸಿದರು. ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ