ಪುತ್ತೂರು :ಫಿಲೋಮಿನಾ ಕಾಲೇಜಿನಲ್ಲಿ ಸೆಪ್ಟೆಂಬರ್ 13ರಂದು 'ಪ್ರತಿಭಾ- 2024' ಪ್ರೌಢ ಶಾಲಾ ಮಟ್ಟದ ಸ್ಪರ್ಧೆ

Upayuktha
0


ಪುತ್ತೂರು :
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾ - 2024 ಕಾರ್ಯಕ್ರಮವು ಸೆಪ್ಟೆಂಬರ್ 13ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ.


 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ  ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ, ಗೌರವ ಉಪಸ್ಥಿತಿಯಲ್ಲಿ ಪುತ್ತೂರಿನ ದಂತ ವೈದ್ಯರು ಹಾಗೂ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ  ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ  ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ. ಅದೇ ರೀತಿ ಸಮಾರೋಪ ಸಮಾರಂಭದಲ್ಲಿ  ಮುಖ್ಯ ಅತಿಥಿಗಳಾಗಿ ಪುತ್ತೂರಿನ ಇಂಪೀರಿಯಲ್ ಫರ್ನಿಚರ್ ನ ಮಾಲಕರಾದ Violet pinto ವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top