ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ‘ನಿರ್ಮಾಣ್’ ವಸ್ತು ಪ್ರದರ್ಶನ

Upayuktha
0


ಪುತ್ತೂರು:
ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ರ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ‘ನಿರ್ಮಾಣ್’ ಉತ್ಪಾದನಾ ಪ್ರಕ್ರಿಯೆ ಮಾದರಿ ಪ್ರದರ್ಶನವೂ ಸುವರ್ಣಮಹೋತ್ಸವ ಸಭಾಭವನದಲ್ಲ್ಲಿ ಯಶಸ್ವಿಯಾಗಿ ಮೂಡಿಬಂದಿತು. ವಿವೇಕಾನಂದ  ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ, ಶ್ರೀ ದೇವಿಚರಣ್ ರೈ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ 51 ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. 


ವಿದ್ಯಾರ್ಥಿಗಳು 13 ತಂಡಗಳಲ್ಲಿ ಸ್ಥಳೀಯ ಉದ್ಯಮಗಳಾದ ಫ್ಲೇರ‍್ಸ್  ಐಸ್ಕ್ರಿಂ, ಕೋಕೋ ಗುರು, ಸ್ಪೆಷಾಲಿಟಿ ಗ್ರಾಫೈಟ್ಸ್, ಎಂ ಬಿ ಸಿ ಶಿವಾನಿ, ಸುರಕ್ಷಾ ಇಂಟರ್‌ಲಾಕಿಂಗ್ ಮಡ್ ಬ್ಲಾಕ್, ಐಡಿಯಲ್ ಕ್ಯಾಶ್ಯೂ ಸೇರಿದಂತೆ ಇನ್ನೂ ಹಲವಾರು ಉದ್ಯಮಗಳಿಗೆ ಭೇಟಿ ನೀಡಿ ಅಲ್ಲಿನ ಉತ್ಪಾದನಾ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಿ ರಚಿಸಿದ ಮಾದರಿಗಳು ಪ್ರದರ್ಶನಗೊಂಡು ವೀಕ್ಷಕರ ಮೆಚ್ಚುಗೆಗೆ ಪಾತ್ರವಾದವು. ಈ ಕಾರ್ಯಕ್ರಮದಲ್ಲಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಉದ್ಯಮಗಳ ಮಾದರಿಗಳನ್ನು ವೀಕ್ಷಣೆ ಮಾಡಿ ಅವುಗಳ ಉತ್ಪಾದನಾ ವಿಧಾನ - ಕಾರ್ಯನಿರ್ವಹಣೆಯ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೇ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳಉಪನ್ಯಾಸಕರು ಹಾಗೂ ಆಸಕ್ತ ವಿದಾರ್ಥಿಗಳು ಭಾಗವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top