ಗುಣಮಟ್ಟದ ಶಿಕ್ಷಣ ನೀಡಿಕೆ ಸರ್ಕಾರದ ಆದ್ಯತೆ: ಕಾಶಪ್ಪನವರ

Upayuktha
1 minute read
0


ಹುನಗುಂದ: ಗ್ರಾಮೀಣ ಭಾಗವೂ ಸೇರಿದಂತೆ ಎಲ್ಲ ಮಕ್ಕಳಿಗೆ ಸರ್ಕಾರದ ಸೌಲಭ್ಯದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲು ತಮ್ಮ ಸರ್ಕಾರ ಬದ್ಧ ಎಂದು ಕರ್ನಾಟಕ ವೀರಶೈವ -ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.


ಅವರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ಒಕ್ಕೂಟ ಉದ್ಘಾಟಿಸಿ ಮಾತನಾಡಿದರು.


ತಹಶೀಲ್ದಾರ್ ನಿಂಗಪ್ಪ ಬಿರಾದಾರ ಮತ್ತು ಪದವಿ ಕಾಲೇಜು ಸಿಡಿಸಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ ಅತಿಥಿಗಳಾಗಿ ಮಾತನಾಡಿದರು.


ಇದೇ ಸಂದರ್ಭದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ, ತಹಶೀಲ್ದಾರ್ ನಿಂಗಪ್ಪ ಬಿರಾದಾರ ಮತ್ತು ದಾನಿಗಳಾದ ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಅವರನ್ನು ಸತ್ಕರಿಸಲಾಯಿತು. ಸಿಡಿಸಿ ಉಪಾಧ್ಯಕ್ಷ ಮಹಾಂತೇಶ ಪರೂತಿ, ಸದಸ್ಯರು, ಪದವಿ ಕಾಲೇಜು ಪ್ರಭಾರ  ಪ್ರಾಂಶುಪಾಲ ಡಾ. ಸುರೇಶ ಉಪಸ್ಥಿತರಿದ್ದರು.


ಪ್ರಭಾರ ಪ್ರಾಂಶುಪಾಲ ಶರಣಪ್ಪ ಹೂಲಗೇರಿ ಸ್ವಾಗತಿಸಿದರು. ವಿ.ಕೆ. ಶಶಿಮಠ ಪ್ರತಿಜ್ಞಾವಿಧಿ ಬೋಧಿಸಿದರು. ಐ.ಎಚ್.ನಾಯಕ ಪರಿಚಯಿಸಿದರು. ಡಾ..ಎನ್.ವೈ.ನದಾಫ ನಿರೂಪಿಸಿದರು. ಎಚ್.ಟಿ. ಅಗಸಿಮುಂದಿನ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top