ರೋಟರಿ ಬೆಳ್ತಂಗಡಿ: ಮುಟ್ಟಿನ ನೈರ್ಮಲ್ಯ ಕಾರ್ಯಕ್ರಮ
ಇವರು ಬೆಳ್ತಂಗಡಿ ರೋಟರಿ ಕ್ಲಬ್ ಬೆಳ್ತಂಗಡಿ, ಅಂಗ ಸಂಸ್ಥೆ ಹ್ಯಾನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಇಂದಿರಾನಗರ, ಬೆಂಗಳೂರು ಸಹಯೋಗದಲ್ಲಿ ಬೆಳ್ತಂಗಡಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮುಟ್ಟಿನ ನೈರ್ಮಲ್ಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಂದು ಜೀವಿಯೂ ಒಂಬತ್ತು ತಿಂಗಳಗಳ ಕಾಲ ಬೆಚ್ಚಗೆ ಇದ್ದ ಮನೆ ತಾಯಿಯ ಗರ್ಭ. ಇದರ ಬಗ್ಗೆ ಪ್ರತಿಯೊಬ್ಬರಿಗೂ ಗೌರವ ಮತ್ತು ಕಾಳಜಿ ಇರಬೇಕು. ಇತ್ತೀಚೆಗಿನ ದಿನಗಳಲ್ಲಿ ಮಹಿಳೆಯರಲ್ಲಿ ಗರ್ಭಕೋಶದ ಹಾಗೂ ಗರ್ಭಕಂಠದ ಕ್ಯಾನ್ಸರ್‌ಗಳು ಹೆಚ್ಚುತ್ತಿವೆ. ಇದರ ಮುಂಜಾಗ್ರತೆಗಾಗಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳಬೇಕು. ಆರೋಗ್ಯದ ಸುಸ್ಥಿರತೆಗೆ ನಾವು ಪ್ರಾಮುಖ್ಯತೆ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿದ್ದ ವಿದ್ಯಾರ್ಥಿಗಳು ಕೇಳಿದ ಹಲವು ಪ್ರಶ್ನೆ ಮತ್ತು ಸಂಶಯಗಳಿಗೆ ಹೆಣ್ಣು ಮತ್ತು ಗಂಡು ಮಕ್ಕಳ ಸಹಭಾಗಿತ್ವದಲ್ಲೇ ಸಮಾಲೋಚಿಸಿ ರೋ. ಸೌಮ್ಯ ಶ್ರೀಕಾಂತ್ ಉತ್ತರಿಸಿದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ಮಾತನಾಡಿ, ಮಾನವನ ದೇಹದ ಸಹಜ ಬದಲಾವಣೆಗಳ ಕುರಿತು ಯಾವುದೇ ಮುಚ್ಚು ಮರೆ ಬೇಡ. ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ಹಂತದಿಂದಲೇ ಅರಿವು ಮೂಡಬೇಕು ಎಂದರು.
ಅಧ್ಯಕ್ಷತೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ಸುಕುಮಾರ್ ಜೈನ್ ವಹಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಆನ್ಸ್ ಕ್ಲಬ್ ಸದಸ್ಯೆ ರಶ್ಮಿ ಪಟುವರ್ಧನ್ ಪೂರ್ವ ಅಧ್ಯಕ್ಷೆ ರೋ. ಮನೋರಮ ಭಟ್, ರೋಟರಿ ಕ್ಲಬ್ ಇಂದಿರಾನಗರ, ಬೆಂಗಳೂರು ರೋ. ಡಾ. ಶ್ರಿಕಾಂತ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗು ಉಪನ್ಯಾಸಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಗಣೇಶ್ ರಾಮಚಂದ್ರ ಭಟ್ ಸ್ವಾಗತಿಸಿ ಸಂದೇಶ್ ಕುಮಾರ್ ರಾವ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ