ಉಜಿರೆ: ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ. ಋಷಿ ಮುನಿಗಳು ಕವಿಗಳು ಬೆಳೆಸಿದ ಸಂಸ್ಕೃತ ಭಾಷೆಯು ಮುಂದಿನ ಜನಾಂಗಕ್ಕೂ ದಾಟಬೇಕು. ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಅವರು ಹೇಳಿದರು.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವುಗಳ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಸುಕುಮಾರ ಜೈನ್ ಅವರು ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ತಳಹದಿ. ವಿದ್ಯಾರ್ಥಿಗಳ ಸಂಸ್ಕಾರ ಬೆಳೆಸುವಲ್ಲಿ ಭಾಷೆಗಳ ಕೊಡುಗೆ ಅಪಾರ ಎಂದು ನುಡಿದರು.
ವೇದಿಕೆಯಲ್ಲಿ ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ, ಎಸ್‌ಡಿಎಂ ಪದವಿ ಕಾಲೇಜಿನ ಕಲಾ ವಿಭಾಗದ ಡೀನ್ ಡಾ.ಶ್ರೀಧರ ಭಟ್, ಶೃಂಗೇರಿಯ ಸರಕಾರಿ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಡಾ. ಮಹೇಶ ಕಾಕತ್ಕರ್ ಅಭ್ಯಾಗತರಾಗಿ ಮಾತನಾಡಿದರು. ಎಸ್‌ಡಿಎಂ ಪ.ಪೂ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಇವರು ಶುಭಾಶಂಸನೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಸ್ವಾಗತಿಸಿದರು, ಕಾರ್ಯದರ್ಶಿ ಡಾ.ಮಧುಕೇಶ್ವರ ಶಾಸ್ತ್ರಿ ವಂದಿಸಿದರು. ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಜಿರೆಯ ಎಸ್.ಡಿ.ಎಂ ಸನಿವಾಸ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಮಹೇಶ್ ಭಟ್ ಪರಿಚಯಿಸಿದರು. ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ