ಕಾಸರಗೋಡು: ಆರ್ಯ ಯಾನೆ ಮರಾಠ ಸಮಾಜ ಸಂಘ ಇತ್ತೀಚೆಗೆ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿವೇತನ ವಿತರಣೆ, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಹಾಯಧನ, ಸಾಧಕರ ಸನ್ಮಾನ ಸಮಾರಂಭವನ್ನು ಶ್ರೀ ಭಗವತಿ ಸಭಾಭವನ ಪಿಲಿಕುಂಜೆ, ಕಾಸರಗೋಡು ಇಲ್ಲಿ ಹಮ್ಮಿಕೊಂಡಿತ್ತು.
ಸಮಾರಂಭವನ್ನು ಕಾಸರಗೋಡು ವಿಧಾನ ಸಭಾಕ್ಷೇತ್ರದ ಶಾಸಕ ಎನ್ ಎ ನೆಲ್ಲಿಕುನ್ನು ಉದ್ಘಾಟಿಸಿದರು. 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, 13 ವಿಶೇಷಚೇತನ ವಿದ್ಯಾರ್ಥಿಗಳಿಗೆ ಸಹಾಯಧನ, 38 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು 23 ವಿದ್ಯಾರ್ಥಿಗಳಿಗೆ ವಿಶೇಷ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೆ ವಿದ್ಯಾ ಕ್ಷೇತ್ರದಲ್ಲಿ ಸಾಧನೆಗೈದ 3 ಸಾಧಕರಿಗೆ ಸನ್ಮಾನ ಮತ್ತು ಸಮಾಜದಲ್ಲಿ ಸಾಧನೆಗೈದ ಒಬ್ಬರಿಗೆ ಸನ್ಮಾನ ಮಾಡಲಾಯಿತು.
ಸಂಘದ ಅಧ್ಯಕ್ಷ ಯು ಮೋಹನ್ ರಾವ್ ಭೋಂಸ್ಥೆ ಮಾತನಾಡಿ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮತ್ತು ಕ್ರೀಡೆಯಲ್ಲಿ ಸ್ಫೂರ್ತಿ ನೀಡುವ ಸಲುವಾಗಿ ಈ ಕಾರ್ಯಕ್ರಮವನ್ನು ಪ್ರತಿ ವರ್ಷ ಹಮ್ಮಿ ಕೊಳ್ಳಲಾಗುತ್ತಿದೆ, ಎಂದರು. ನ್ಯಾಯವಾದಿ ಏಲ್ಲೋಜಿ ರಾವ್ ಕೌಮಾರ್ ಸಂಸ್ಮರಣೆ ಹಾಗೂ ಸಮಾಜದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.
ಸರಕಾರಿ ಕಾಲೇಜು ಕಾಸರಗೋಡು ಇಲ್ಲಿನ ವಿಶ್ರಾಂತ ಪ್ರಾಧ್ಯಾಪಕ ಡಾ. ಮಹೇಶ್ವರಿ ಯು, ಕಾಸರಗೋಡು ನಗರ ಸಭೆ ವಾರ್ಡ್ ಕೌನ್ಸಿಲರ್ ಶ್ರೀಮತಿ ವಿಮಲ ಶ್ರೀಧರ್, ಎಲ್ಲೋಜಿ ರಾವ್ ಎಡ್ವಕೇಟ್ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷೆ ಪ್ರೇಮಲತಾ ವೈ. ರಾವ್, ರಾಯಲ್ ಆರ್ಯಾಸ್ ದುಬೈ ಪ್ರತಿನಿಧಿ ಹರೀಶ್ ಚಂದ್ರಮಾನ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ