ಕೊಡಗಿನ ಕವಿ, ಸಾಹಿತಿ ವೈಲೇಶ.ಪಿ.ಎಸ್‌ರಿಗೆ 'ಸೇವಾಭೂಷಣ ಪ್ರಶಸ್ತಿ'

Upayuktha
0


ಮಡಿಕೇರಿ: ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ 13 ನೆಯ ವರ್ಷದ ವಾರ್ಷಿಕೋತ್ಸವ ಹಾಗೂ ಹಿಂದುಳಿದ ವರ್ಗದವರಿಗೆ ರಾಜರ್ಷಿ ಕೃಷ್ಣರಾಜ ಒಡೆಯರ್‌ರವರು ಅನುಷ್ಟಾನಕ್ಕೆ ತಂದಿರುವ ಮೀಸಲಾತಿಯ 105ನೆಯ ಸಂಭ್ರಮಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡಲಾಗುವ “ಸೇವಾಭೂಷಣ ಪ್ರಶಸ್ತಿ"ಗೆ ಕೊಡಗು ಜಿಲ್ಲೆಯ ಸಾಹಿತಿ ವೈಲೇಶ ಪಿ.ಎಸ್. ಕೊಡಗು ಆಯ್ಕೆಯಾಗಿದ್ದಾರೆ.


ಇವರ ಸಾಹಿತ್ಯ ಮತ್ತು ಸಾಹಿತ್ಯ ಸಂಘಟನೆಯ ಕ್ಷೇತ್ರಗಳ ಸಾಧನೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ.28 ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಎಚ್.ಎಲ್. ಯಮುನಾ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top