ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಯುವ ಮೋರ್ಚಾ ವತಿಯಿಂದ ನಡೆದ ಸೇವಾ ಕಾರ್ಯಕ್ರಮದ ಭಾಗವಾಗಿ ಪಡೀಲಿನ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಭೂತ ಸಲಕರಣೆಗಳ ಸಹಿತ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾಯಕಯೋಗಿ ನರೇಂದ್ರ ಮೋದಿಯವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು ಭಾರತದ ಗತವೈಭವವನ್ನು ಜಗತ್ತಿನೆಲ್ಲೆಡೆ ಸಾರಿದ್ದಾರೆ. ದೇಶದ ಪ್ರತಿಯೊಬ್ಬರ ಶುಭ ಹಾರೈಕೆಯೂ ಅವರ ಮೇಲಿದ್ದು ಭಗವಂತ ಅವರಿಗೆ ಹೆಚ್ಚಿನ ಆರೋಗ್ಯ ಆಯುಷ್ಯ ಕೊಟ್ಟು ಕಾಪಾಡಲಿ. ಅವರ ಜನ್ಮದಿನದ ಅಂಗವಾಗಿ ದಕ್ಷಿಣ ಮಂಡಲದ ಯುವ ಮೋರ್ಚಾದವರು ನಡೆಸುತ್ತಿರುವ ಈ ಕಾರ್ಯ ಶ್ಲಾಘನೀಯ ಎಂದು ಶಾಸಕರು ಮೆಚ್ಚುಗೆ ಸೂಚಿಸಿದರು.
ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟುರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ಎಂ, ಕಿಶೋರ್ ಕೊಟ್ಟಾರಿ, ಮಂಜುಳಾ ರಾವ್, ಲೀಲಾವತಿ ಪ್ರಕಾಶ್, ಶೋಭಾ ಪೂಜಾರಿ, ರೂಪಶ್ರೀ, ಪೂರ್ಣಿಮಾ ರಾವ್, ಪ್ರವೀಣ್ ನಿಡ್ಡೇಲ್, ರಾಮ್ ಪ್ರಸಾದ್, ವಿಜಯ್ ಕುಮಾರ್ ಶೆಟ್ಟಿ, ಜಯ ಕುಮಾರ್, ಅಜಯ್ ಕುಡುಪು, ರಾಕೇಶ್ ರೈ, ಅಮಿತ್ ರಾಜ್, ಕಿರಣ್ ರೈ, ಭಾಸ್ಕರ ಚಂದ್ರ ಶೆಟ್ಟಿ, ಚಂದ್ರಾವತಿ ವಿಶ್ವನಾಥ್ ಮುಂತಾದವರು ಉಪಸ್ಥಿತರಿದ್ದರು.
ಮಧುರಾಜ್ ಕಾರ್ಯಕ್ರಮ ನಿರೂಪಿಸಿದರೆ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ ಸ್ವಾಗತಿಸಿ, ಮೌನೀಶ್ ಚೌಟ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ